ತುಮಕೂರು: ಕುಣಿಗಲ್ ತಾಲೂಕು ಕೊತ್ತಗೆರೆ ಹೋಬಳಿಯ ಕುಣಿಗಲ್ ವಡ್ಡರಕುಪ್ಪೆ ಗ್ರಾಮದ ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆಯೊಂದರ ಬಾಲಕಿಗೆ ಅಶ್ಲೀಲ ಚಿತ್ರ ತೋರಿಸಿ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನಿಗೆ 5 ವರ್ಷ ಜೈಲು ಹಾಗೂ 1 ಲಕ್ಷ ರೂಪಾಯಿ ದಂಡ ವಿಧಿಸಿ ತುಮಕೂರಿನ ಗೌರವಾನ್ವಿತ ಅಧಿಕ ಜಿಲ್ಲಾ ಸತ್ರ ನ್ಯಾಯಾಲ ಎಫ್ ಟಿ ಎಸ್ ಸಿ ತೀರ್ಪು ನೀಡಿದೆ.
ದಿನಾಂಕ 20—11—2021ರಂದು ಶಿಕ್ಷಕ ದಯಾನಂದ್ ಎಂಬಾತ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸುವ ಉದ್ದೇಶದಿಂದ ಮೊಬೈಲ್ ನಲ್ಲಿ ಅಶ್ಲೀಲ ಚಿತ್ರ ತೋರಿಸಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಬಳಿಕ ಈ ವಿಚಾರ ಮನೆಯವರಿಗೆ ಹೇಳದಂತೆ ಪ್ರಾಣ ಬೆದರಿಕೆ ಕೂಡ ಹಾಕಿದ್ದ ಎಂದು ಕುಣಿಗಲ್ ಠಾಣಾ ಪೊಲೀಸ್ ತನಿಖಾಧಿಕಾರಿಗಳಾದ ಅಶೋಕ್ ಕುಮಾರ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು, ದಯಾನಂದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವುದು ಹಾಗೂ ಅಶ್ಲೀಲ ಚಿತ್ರ ತೋರಿಸಿರುವುದು ಸಾಬೀತಾದ ಕಾರಣ ಪೋಕ್ಸೋ ಕಾಯ್ದೆಯಡಿಯಲ್ಲಿ 5 ವರ್ಷ ಜೈಲು ಶಿಕ್ಷೆ ಮತ್ತು 1 ಲಕ್ಷ ರೂಪಾಯಿ ದಂಡ ವಿಧಿಸಿದ್ದು, ಈ ದಂಡದ ಮೊತ್ತದಲ್ಲಿ 50 ಸಾವಿರ ರೂಪಾಯಿ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ 10 ಸಾವಿರ ರೂಪಾಯಿಗಳ ಪರಿಹಾರ ನೀಡುವಂತೆ ತಿಳಿಸಿದೆ. ಅಭಿಯೋಜನೆಯ ಪರವಾಗಿ ಆಶಾ ಕೆ.ಎಸ್ ವಾದ ಮಂಡಿಸಿದರು.
ವರದಿ: ಶಿವಕುಮಾರ್, ಮೇಷ್ಟ್ರುಮನೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA