ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟಕ್ಕೆ 24 ನೂತನ ಸಚಿವರು ಸೇರ್ಪಡೆಯಾಗುವುದರೊಂದಿಗೆ ರಾಜ್ಯದಲ್ಲಿ ದಶಕಗಳ ನಂತರ ಮೊದಲ ವಿಸ್ತರಣೆಯಲ್ಲಿಯೇ ಪೂರ್ಣ ಪ್ರಮಾಣದ ಸಂಪುಟ ರಚನೆಯಾದದ್ದು ಒಂದು ದಾಖಲೆಯಾಗಿದೆ.
ಇಲ್ಲಿನ ರಾಜಭವನದ ಗಾಜಿನ ಮನೆಯಲ್ಲಿ ಇಂದು ಬೆಳಗ್ಗೆ ನಡೆದ ವಿಶೇಷ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ ಯು ಟಿ ಖಾದರ್ ಅವರ ಸಮ್ಮುಖದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಸಚಿವರಿಗೆ ಅಧಿಕಾರ ಪದ ಮತ್ತು ಗೋಪ್ಯತಾ ಪ್ರಮಾಣ ವಚನವನ್ನು ಬೋಧಿಸಿದರು.
ಹೆಚ್ ಕೆ ಪಾಟೀಲ್, ಕೃಷ್ಣಬೈರೇಗೌಡ, ಎನ್ ಚೆಲುವರಾಯಸ್ವಾಮಿ, ಕೆ ವೆಂಕಟೇಶ್, ಡಾ ಹೆಚ್ ಸಿ ಮಹದೇವಪ್ಪ ಈಶ್ವರ್ ಖಂಡ್ರೆ, ಕೆ ಎನ್ ರಾಜಣ್ಣ, ದಿನೇಶ್ ಗುಂಡೂರಾವ್, ಶರಣಬಸಪ್ಪ ಬಾಪೂ ಗೌಡ ದರ್ಶನಾಪುರ. ಶಿವಾನಂದ ಪಾಟೀಲ್, ಆರ್ ಬಿ ತಿಮ್ಮಾಪುರ್ ಎಸ್ ಎಸ್ ಮಲ್ಲಿಕಾರ್ಜುನ್, ಶಿವರಾಜ್ ತಂಗಡಗಿ, ಶರಣ ಪ್ರಕಾಶ್ ಪಾಟೀಲ್, ಮಾಂಕಾಳ ವೈದ್ಯ, ಲಕ್ಷ್ಮಿ ಹೆಬ್ಬಾಳ್ಕರ್, ರಹೀಂ ಖಾನ್, ಡಾ ಡಿ ಸುಧಾಕರ್, ಸಂತೋಷ್ ಲಾಡ್, ನಡಿನಪಲ್ಲಿ ಸುಭಾಷ್ ಚಂದ್ರ ಬೋಸರಾಜು, ಬಿ ಎಸ್ ಸುರೇಶ್ ( ಬೈರತಿ ಸುರೇಶ್ ) ಸಾರೇಕೊಪ್ಪ ಮಧು ಬಂಗಾರಪ್ಪ, ಎಂ ಸಿ ಸುಧಾಕರ್ ಹಾಗೂ ನಾಗೇಂದ್ರ ಅವರು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇವರಲ್ಲಿ ಎನ್ ಎಸ್ ಬೋಸರಾಜು ಅವರು ಯಾವುದೇ ಸದನದ ಸದಸ್ಯರಲ್ಲ.
ಮೊದಲ ಬಾರಿಗೆ ಸಚಿವರು:
ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಕೆ ವೆಂಕಟೇಶ್, ಮಧುಗಿರಿ ವಿಧಾನಸಭಾ ಕ್ಷೇತ್ರದ ಕ್ಯಾತಸಂದ್ರ ನಂಜಪ್ಪ ರಾಜಣ್ಣ, ಭಟ್ಕಳ ವಿಧಾನಸಭಾ ಕ್ಷೇತ್ರದ ಮಾಂಕಾಳ ವೈದ್ಯ, ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಲಕ್ಷೀ ಹೆಬ್ಬಾಳ್ಕರ್, ರಾಯಚೂರು ಜಿಲ್ಲೆಯ ಕಾಂಗ್ರೆಸ್ ಮುಖಂಡ ಎನ್ ಎಸ್ ಬೋಸರಾಜು, ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಬೈರತಿ ಸುರೇಶ್, ಸೊರಬ ವಿಧಾನಸಭಾ ಕ್ಷೇತ್ರದ ಮಧು ಬಂಗಾರಪ್ಪ ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಎಂ ಸಿ ಸುಧಾಕರ್ ಹಾಗೂ ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಿ ನಾಗೇಂದ್ರ ಅವರು ಮೊದಲ ಬಾರಿಗೆ ಸಚಿವರಾಗಿದ್ದಾರೆ. ಉಳಿದವರು ಈ ಹಿಂದೆ ಸಚಿವರಾಗಿ ಸೇವೆ ಸಲ್ಲಿಸಿರುವ ಅನುಭವವನ್ನು ಹೊಂದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


