ಬೆಂಗಳೂರು: ಮಹಿಳೆಯರಿಗೆ ಬಸ್ ಪಾಸ್ ಕೊಟ್ಟೆ ಕೊಡುತ್ತೇವೆ. ವಿರೋಧ ಪಕ್ಷದವರು ತಾಳ್ಮೆಯಿಂದ ಇರಲಿ ಎಂದು ಸಾರಿಗೆ ಹಾಗೂ ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮಹಿಳೆಯರಿಗೆ ಪಾಸ್ ವಿಚಾರ ಸಂಬಂಧ ಪ್ರತಿಕ್ರಿಯಿಸಿ, ಈ ಬಗ್ಗೆ ಜೂನ್ 1 ರಂದು ಕ್ಯಾಬಿನೆಟ್ ನಲ್ಲಿ ನಿರ್ಧಾರ ಆಗುತ್ತೆ. ಮಹಿಳೆಯರಿಗೆ ಬಸ್ ಪಾಸ್ ಕೊಟ್ಟೇ ಕೊಡುತ್ತೇವೆ. ವಿರೋಧ ಪಕ್ಷದವರು ತಾಳ್ಮೆಯಿಂದ ಇರಲಿ. ಆದರೆ ಎಷ್ಟು ಜನ ಓಡಾಡ್ತಾರೆ ಅನ್ನೋ ಬಗ್ಗೆ ಮಾಹಿತಿ ಕೇಳಿದ್ದೇವೆ. ಸ್ಕೂಲ್ ಬಸ್ ಪಾಸ್ ನಂತೆ ಮಹಿಳೆಯರ ಬಸ್ ಪಾಸ್‍ಗೂ ಇಲಾಖೆಗಳಿಗೆ ಹಣ ಕೊಡ್ತೇವೆ ಎಂದರು.
ತಾತ್ವಿಕ ಒಪ್ಪಿಗೆ ಸಿಕ್ಕಿದೆ. ಮಕ್ಕಳಿಗೆ ಬಸ್ ಪಾಸ್ ನಂತೆ ಮಹಿಳೆಯರ ಲೆಕ್ಕದಂತೆ ದುಡ್ಡು ಕೊಡಬೇಕಾಗುತ್ತದೆ. ವಿರೋಧ ಪಕ್ಷದವರು ರಚನಾತ್ಮಕವಾಗಿ ಟೀಕೆ ಮಾಡಲಿ. ಒಟ್ಟಿನಲ್ಲಿ ಗ್ಯಾರಂಟಿ ಕಾರ್ಡ್ ಕೊಟ್ಟೆ ಕೊಡುತ್ತೇವೆ. ರಾಜ್ಯದ ಮಹಿಳೆಯರಿಗೆ ಮಾತ್ರ ಕೊಡುತ್ತೇವೆ ಎಂದು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


