ತುಮಕೂರು: ಅಕ್ರಮವಾಗಿ ಜಾನುವಾರು ಸಾಗುಸುತ್ತಿದ್ದ ಸ್ಕಾರ್ಪಿಯೋ ಕಾರು ಅಪಘಾತಕ್ಕೀಡಾದ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಮಾಗಡಿಪಾಳ್ಯದ ಬಳಿ ನಡೆದಿದೆ.
ಬೆಂಗಳೂರು– ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿದೆ. ಅಪಘಾತ ಬಳಿಕ ಕಾರಿನಲ್ಲಿ ಜಾನುವಾರು ಸಾಗಿಸುತ್ತಿದ್ದ ಪ್ರಕರಣ ಬಯಲಾಗಿದೆ.
ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಪಘಾತಕ್ಕೀಡಾದ ಕಾರಿನಲ್ಲಿದ್ದ ಕರುಗಳನ್ನು ಪೊಲೀಸರು ಗೋಶಾಲೆಗೆ ಬಿಟ್ಟಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


