ಕರ್ನಾಟಕದ ವಿವಿಧೆಡೆ ಲೋಕಾಯುಕ್ತ ದಾಳಿ. ಬೆಂಗಳೂರು, ತುಮಕೂರು, ಹಾವೇರಿ ಮತ್ತಿತರ ಜಿಲ್ಲೆಗಳ ಸರ್ಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳಲ್ಲಿ ತಪಾಸಣೆ ನಡೆಸಲಾಯಿತು. ಸರ್ಕಾರಿ ಅಧಿಕಾರಿಗಳು ಆದಾಯ ಮೀರಿ ಸಂಪತ್ತು ಗಳಿಸಿದ್ದಾರೆ ಎಂಬ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಲೋಕಾಯುಕ್ತರು ಅಧಿಕಾರಿಗಳ ಆದಾಯ ಮೂಲ, ಆಸ್ತಿ ದಾಖಲೆ ಹಾಗೂ ಬ್ಯಾಂಕ್ ವಿವರಗಳನ್ನು ಪರಿಶೀಲಿಸುತ್ತಾರೆ.
ಬೆಂಗಳೂರಿನ ಎರಡು ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಬಸವೇಶ್ವರನಗರದಲ್ಲಿರುವ ಬೆಸ್ಕಾಂ ತಾಂತ್ರಿಕ ನಿರ್ದೇಶಕ ರಮೇಶ್ ಅವರ ಮನೆ ಹಾಗೂ ವಿಜಯನಗರ ಮಾರುತಿ ಮಂದಿರ ಬಳಿ ಇರುವ ಕೈಗಾರಿಕೆ ಮತ್ತು ಬಾಯ್ಲರ್ ಉಪನಿರ್ದೇಶಕ ಟಿ.ವಿ.ನಾರಾಯಣಪ್ಪ ಅವರ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆದಿದೆ. ತುಮಕೂರು ಜಿಲ್ಲೆಯ ಆರ್.ಟಿ.ನಗರದಲ್ಲಿರುವ ಕೆಐಎಡಿಬಿ ಅಧಿಕಾರಿ ನರಸಿಂಹಮೂರ್ತಿ ಅವರ ಮನೆ ಮೇಲೆ ಲೋಕಾಯುಕ್ತ ಡಿಎಸ್ಪಿಗಳಾದ ಮಂಜುನಾಥ್ ಮತ್ತು ಹರೀಶ್ ನೇತೃತ್ವದಲ್ಲಿ ದಾಳಿ ನಡೆದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy