ತುರುವೇಕೆರೆ: ವಿಧಾನಸಭಾ ಕ್ಷೇತ್ರದ ಕಸಬಾ ಹೋಬಳಿಯ. ಮುನಿಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೂತನ ಶಾಸಕ ಎಂ.ಟಿ.ಕೃಷ್ಣಪ್ಪ ಇಂದು ಕೃತಜ್ಞತಾ ಯಾತ್ರೆ ಕೈಗೊಂಡರು.
ಹಲವಾರು ಗ್ರಾಮಗಳಲ್ಲಿ ಗ್ರಾಮಸ್ಥರು ಹಾಗೂ ಪಕ್ಷದ ಕಾರ್ಯಕರ್ತರು ಶಾಸಕರನ್ನು ಅದ್ದೂರಿಯಾಗಿ ಬರಮಾಡಿಕೊಂಡು ಸನ್ಮಾನಿಸಿ, ಗ್ರಾಮದ ಅಭಿವೃದ್ಧಿ ಕಾರ್ಯಗಳ ಮನವಿ ಪತ್ರವನ್ನು ನೀಡಿದರು.
ಮನವಿಗಳನ್ನು ಸ್ವೀಕರಿಸಿದ ಶಾಸಕ ಎಂ.ಟಿ.ಕೃಷ್ಣಪ್ಪ, ಈ ಕ್ಷೇತ್ರ ವ್ಯಾಪ್ತಿಯಲ್ಲಿ ಶೀಘ್ರದಲ್ಲೇ ಅಭಿವೃದ್ಧಿ ಕಾರ್ಯಕ್ರಮಗಳನ್ನು ನಿಮ್ಮೆಲ್ಲರೊಡನೆ ಮಾಡುತ್ತೇನೆ ಹಾಗೂ ಈ ಚುನಾವಣೆಯಲ್ಲಿ ನನ್ನನ್ನು ಶಾಸಕನನ್ನಾಗಿ ಆಯ್ಕೆ ಮಾಡಿದ ತಮ್ಮೆಲ್ಲರಿಗೂ ಅಭಿನಂದನೆಗಳು ಎಂದು ತಿಳಿಸಿದರು.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA