ಇಂಫಾಲ್: ಈಶಾನ್ಯ ರಾಜ್ಯಮಣಿಪುರದಲ್ಲಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪುರ ಹಿಂಸಾಚಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆದೇಶ ನೀಡಿದ್ದಾರೆ.
ಮಣಿಪುರದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಮಾಜಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದ ಸಮಿತಿ ತನಿಖೆ ನಡೆಸಲಿದೆ ಮತ್ತು ಶಾಂತಿ ಸಮಿತಿಯನ್ನು ರಚಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಹೇಳಿದ್ದಾರೆ.
ರಾಜ್ಯಕ್ಕೆ ನಾಲ್ಕು ದಿನಗಳ ಭೇಟಿ ನೀಡಿದ ಅಮಿತ್ ಶಾ ಈ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಮಣಿಪುರದಲ್ಲಿ ಆದಷ್ಟು ಬೇಗ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ನಿರಾಶ್ರಿತರನ್ನು ಅವರ ಮನೆಗಳಿಗೆ ಹಿಂದಿರುಗಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಮಣಿಪುರ ಶಾಂತವಾಗಿದೆ . ನಾವು ಜನರಿಗೆ ಅಭಿವೃದ್ಧಿ ಮತ್ತು ಕಲ್ಯಾಣವನ್ನು ತಲುಪಿಸುತ್ತಿದ್ದೇವೆ ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


