ಗುಜರಾತ್ ನಲ್ಲಿ ದಲಿತ ಯುವಕನಿಗೆ ಥಳಿತ ಬನಸ್ಕಾಂತ ಜಿಲ್ಲೆಯ ಪಾಲನಪುರ ತಾಲೂಕಿನ ಮೋಟಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಜಿಗರ್ ಶೆಖಾಲಿಯಾ ಅವರು ಉತ್ತಮವಾದ ಬಟ್ಟೆಗಳನ್ನು ಧರಿಸಿದ್ದಕ್ಕಾಗಿ ಮತ್ತು ಸನ್ ಗ್ಲಾಸ್ ಧರಿಸಿದ್ದಕ್ಕಾಗಿ ಮೇಲ್ಜಾತಿಯವರು ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಎನ್‌ಡಿಟಿವಿ ಈ ಸುದ್ದಿಯನ್ನು ವರದಿ ಮಾಡಿದೆ.
ಒಳ್ಳೆಯ ಬಟ್ಟೆ, ಕನ್ನಡಕ ಹಾಕಿಕೊಂಡಿದ್ದಕ್ಕೆ ಯುವಕ ಹಾಗೂ ಆತನ ತಾಯಿಯನ್ನು ಏಳು ಮಂದಿ ಥಳಿಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ. ಸಂತ್ರಸ್ತೆಯ ತಾಯಿಯ ಮೇಲೂ ಹಲ್ಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಇಬ್ಬರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದೂರಿನ ಪ್ರಕಾರ, ಆರೋಪಿಗಳಲ್ಲಿ ಒಬ್ಬನು ಇತ್ತೀಚೆಗೆ ಹೆಚ್ಚು ಹಾರಾಡುತ್ತಿದ್ದಾನೆ ಮತ್ತು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ನಂತರ ಅದೇ ರಾತ್ರಿ ಗ್ರಾಮದ ದೇವಸ್ಥಾನದ ಹೊರಗೆ ನಿಂತಿದ್ದ ಯುವಕನಿಗೆ ರಜಪೂತ ಪಂಗಡಕ್ಕೆ ಸೇರಿದ ಆರು ಮಂದಿ ಆರೋಪಿಗಳು ಥಳಿಸಿ ಡೈರಿ ಪಾರ್ಲರ್ ಹಿಂದೆ ಎಳೆದೊಯ್ದಿದ್ದರು. ಸನ್ ಗ್ಲಾಸ್ ಹಾಕಿದ್ದು ಏಕೆ ಎಂದು ಪ್ರಶ್ನಿಸಿ ಥಳಿಸಿದ್ದಾರೆ ಎಂದು ಪೊಲೀಸರು ದೂರಿನಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


