ರದ್ದುಗೊಳಿಸಿದ್ದ ಆದೇಶಕ್ಕೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ಶುಕ್ರವಾರ ಮತ್ತೆ ವಿಸ್ತರಿಸಿದೆ.ಹಾಗಾಗಿ, ಗಡಿಪಾರು ಭೀತಿಯಲ್ಲಿದ್ದ ನಟ ಚೇತನ್‌ಗೆ ಹೈಕೋರ್ಟ್‌ನಿಂದ ಮತ್ತೆ ರಿಲೀಫ್ ಸಿಕ್ಕಂತಾಗಿದೆ. ಚೇತನ್ ಕುಮಾರ್ ಸಲ್ಲಿಸಿದ್ದ ಅರ್ಜಿ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ಬಂದಿತು. ಕೆಲಕಾಲ ವಾದ ಆಲಿಸಿದ ನ್ಯಾಯಪೀಠ, ಕೇಂದ್ರ ಸರಕಾರ ಒಸಿಐ ರದ್ದು ಮಾಡಿ ಹೊರಡಿಸಿದ್ದ ಆದೇಶಕ್ಕೆ ನೀಡಿದ್ದ ತಡೆಯಾಜ್ಞೆ ವಿಸ್ತರಿಸಿದ್ದಲ್ಲದೆ, ಚೇತನ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸರಕಾರಕ್ಕೆ ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿತು.
2022ರ ಜೂ.8ರಂದು ನೋಟಿಸ್ ಜಾರಿ: ಅರ್ಜಿದಾರರ ಪರ ವಕೀಲರು, ‘ನ್ಯಾಯಾಲಯ ವಿಧಿಸಿರುವ ಷರತ್ತುಗಳನ್ನು ಅರ್ಜಿದಾರರು ಪಾಲಿಸುತ್ತಿದ್ದಾರೆ. ಹಾಗಾಗಿ, ಹಿಂದೆ ನೀಡಿರುವ ತಡೆಯಾಜ್ಞೆಯನ್ನು ವಿಸ್ತರಿಸಬೇಕು ಎಂದು ಕೋರಿದರು.2018ರಲ್ಲಿ ಚೇತನ್‌ಗೆ ಓವರ್‌ಸ್ ಸಿಟಿಜನ್ ಆಫ್ ಇಂಡಿಯಾ (ಒಸಿಐ) ಕಾರ್ಡ್ ನೀಡಧಿಲಾಗಿತ್ತು. ಆದರೆ, ಅವರ ವಿರುದ್ಧ ಸಮುದಾಯಗಳ ನಡುವೆ ದ್ವೇಷ ಮೂಡಿಸುವ ಯತ್ನ ಮತ್ತು ಭಾರತ ವಿರೋಧಿ ಚಟುವಟಿಕೆ ಆರೋಪಗಳಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಚೇತನ್‌ಗೆ 2022ರ ಜೂ. 8ರಂದು ನೋಟಿಸ್ ನೀಡಿ ಉತ್ತರ ಪಡೆದಿತ್ತು.
ಚೇತನ್ ನೀಡಿದ್ದ ಉತ್ತರ ಸಮಾಧಾನಕರವಾಗಿಲ್ಲದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಒಸಿಐ ಕಾರ್ಡ್ ರದ್ದುಪಡಿಸಿತ್ತು. ಅದನ್ನು ನಟ ಚೇತನ್ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಕಳೆದ ಏ.21 ರಂದು ನಟ ಚೇತನ್‌ಗೆ ಷರತ್ತುಬದ್ಧರಿಲೀಫ್ ನೀಡಿದ್ದ ಹೈಕೋರ್ಟ್, “ನ್ಯಾಯಾಂಗದ ಬಗ್ಗೆ ನಟ ಚೇತನ್ ಟ್ವಿಟ್ ಮಾಡುವಂತಿಲ್ಲ ಬಾಕಿಯಿರುವ ಕೇಸ್‌ಗಳ ಬಗ್ಗೆ ಟ್ವಿಟ್ ಮಾಡುವಂತಿಲ್ಲ” ಎಂಬ ಷರತ್ತುಗಳನ್ನು ವಿಧಿಸಿತ್ತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


