ತುಮಕೂರು: ನಾವು ಐದು ವರ್ಷದವರೆಗೂ ಘೋಷಣೆ ಮಾಡಲಾಗಿರುವಂತಹ ಈ ಐದು ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸುತ್ತೇವೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಅವರು. ನಮ್ಮ ನಾಯಕರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ಚುನಾವಣೆ ವೇಳೆ ಗ್ಯಾರಂಟಿ ಭರವಸೆ ಕೊಟ್ಟಿದ್ರು. ಕೊಟ್ಟ ಭರವಸೆಯಂತೆ ನಮ್ಮ ಗ್ಯಾರಂಟಿಗಳಿಗೆ ನಿನ್ನೆ ಅನುಷ್ಠಾನಕ್ಕೆ ತೀರ್ಮಾನ ಆಗಿದೆ ಎಂದರು.
ಅದರ ಪ್ರೋಸಿಜರ್ ಬಗ್ಗೆ ನಿನ್ನೆ ಚರ್ಚೆ ಆಗಿದೆ. ಅನುಷ್ಠಾನ ಮಾಡೋದಕ್ಕೆ ಆರಂಭ ಮಾಡುತ್ತೇವೆ ಸಂಪನ್ಮೂಲಗಳ ಕ್ತೋಡೀಕರಣ ಪ್ರಶ್ನೆ ಎಲ್ಲರೂ ಎತ್ತಿದ್ರು ಎಂದರು.
ವಿರೋಧ ಪಕ್ಷದವರು ಇದನ್ನು ಒಂದು ಅಸ್ತ್ರವಾಗಿ ಪ್ರಯೋಗ ಮಾಡಿದ್ರು. ಹಣಕಾಸು ವ್ಯಯ ಆಗದೇ, ಜನರ ಹಿತಾಸಕ್ತಿ ಗಮನದಲ್ಲಿ ಇಟ್ಟುಕೊಂಡು ಗ್ಯಾರಂಟಿ ಜಾರಿ ಮಾಡುತ್ತೇವೆ. ಅನಾವಶ್ಯಕವಾದ ಯೋಜನೆ, ಕಾರ್ಯಕ್ರಮ ಇದ್ದರೆ ಅದನ್ನು ಸ್ಥಗಿತ ಮಾಡುತ್ತೇವೆ ಎಂದರು.
ಎಲ್ಲಾ ಯೋಜನೆಗಳ ಡಿಪಿಆರ್ ಮಾಡುವಾಗ ಎಚ್ಚರಿಕೆಯಿಂದ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಭಿವೃದ್ಧಿ ಕುಂಟಿತವಾಗದ ರೀತಿಯಲ್ಲಿ ಗ್ಯಾರಂಟಿ ಜಾರಿ ಮಾಡುತ್ತೇವೆ ಎಂದರು.
ನಿಗಮ ಮಂಡಳಿ ಅನಗತ್ಯ ಇದ್ದರೆ ಅದನ್ನು ಪರಿಶೀಲನೆ ಮಾಡುತ್ತೇವೆ. ಜನಪರ ಆಡಳಿತ ಕೊಡುತ್ತೇವೆ ಎಂದಿದ್ದೇವೆ. ಬೆಲೆ ಏರಿಕೆ ವಿರುದ್ಧ ಜನ ಕಾಂಗ್ರೆಸ್ ಗೆ ಮತ ಹಾಕಿದ್ದಾರೆ. ಅದನ್ನು ಗಮನ ಇಟ್ಟುಕೊಂಡು ಆಡಳಿತ ನಡೆಸುತ್ತೇವೆ ನಾವು ಐದು ವರ್ಷದ ವರೆಗೂ ಈ ಗ್ಯಾರಂಟಿ ಮುಂದುವರೆಸುತ್ತೇವೆ ಎಂದರು.
ಹಾಲಿನ ಪ್ರೋತ್ಸಾಹ ಧನ 7 ರೂಗೆ ಹೆಚ್ಚಿಗೆ ಮಾಡುತ್ತೇವೆ. ಬೆಂಗಳೂರಿನ ಹಾಲು ಒಕ್ಕೂಟದ್ದು ಅವರ ಸ್ವತಃ ನಿರ್ಧಾರದಿಂದ 1.50 ರೂ ಕಡಿಮೆ ಮಾಡಿದ್ದಾರೆ. ಅದು ಸರ್ಕಾರದ ನಿರ್ಧಾರ ಅಲ್ಲ ಎಂದರು.
ಉಸ್ತುವಾರಿ ಸಚಿವರ ಆಯ್ಕೆ ಸಿಎಂ ಅವರ ವಿವೇಚನೆಗೆ ಬಿಟ್ಟಿದ್ದು. ಇನ್ನೆರಡು ದಿನದಲ್ಲಿ ಉಸ್ತುವಾರಿ ಘೋಷಣೆ ಆಗಬಹುದು. ಜುಲೈನಲ್ಲಿ ಸಿಎಂ ಬಜೆಟ್ ಮಂಡನೆ ಮಾಡುತ್ತಾರೆ ಎಂದರು.
ಬಜೆಟ್ ನಲ್ಲಿ ಎತ್ತಿನಹೊಳೆ ಯೋಜನೆ ಬಗ್ಗೆ ಅನುದಾನ ಮೀಸಲು ಇಡಲಾಗುವುದು. ಔರಾದ್ಕರ್ ವರದಿ ಜಾರಿ ಬಗ್ಗೆ ಪರಿಶೀಲನೆ ಮಾಡುತ್ತೇನೆ ಎಂದರು.
7ನೇ ವೇತನ ಆಯೋಗ ಜಾರಿ ಮಾಡಿದರೆ ಔರಾದ್ಕರ್ ವರದಿ ಪ್ರತ್ಯೇಕವಾಗಿ ಜಾರಿ ಮಾಡುವ ಅವಶ್ಯಕತೆ ಇಲ್ಲ. ಸದ್ಯದಲ್ಲೇ 15 ಸಾವಿರ ಪೊಲೀಸ್ ಪೇದೆಗಳ ನೇಮಕ ಮಾಡಲಾಗುತ್ತದೆ ಎಂದರು.
ಪಿಎಸ್ ಐ ನೇಮಕಾತಿ ಹಗರಣ ವಿಚಾರ ತನಿಖೆ ಕಾನೂನು ಪ್ರಕಾರ ನಡೀತಿದೆ. 53 ಜನರು ತಪ್ಪಿತಸ್ಥರು ಎಂದು ಕಂಡು ಬಂದಿದೆ. ಮರು ಪರೀಕ್ಷೆ ಮಾಡಬಾರದು ಎಂದು ಕೋರ್ಟ್ ತಡೆ ನೀಡಿದೆ. ಕಾನೂನು ತಜ್ಞರ ಸಲಹೆ ಪಡೆದು ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA