ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಕನಪುರ್ ಪಟ್ಟಣದ ಶಿವ ಸ್ಮಾರಕ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಹಾಗೂ ಮುಖಂಡರುಗಳ ಚಿಂತನ ಮಂಥನ ಸಭೆಯಲ್ಲಿ ಪಕ್ಷ ಸಂಘಟನೆ ಕರೆ ನೀಡಿದರು.
ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋತಿರಬಹುದು ಆದರೆ ನಮಗೆ ಹಲವಾರು ವಿಷಯಗಳನ್ನು ಕಲಿಸಿಕೊಟ್ಟಿದೆ. ಇದನ್ನು ಪಾಠವಾಗಿ ಸ್ವೀಕರಿಸಿ ಪಕ್ಷವನ್ನು ಕೆಳಮಟ್ಟದಿಂದ ಸಂಘಟಿಸಿ ಮುಂದೆ ನಡೆಯಲಿರುವ ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳನ್ನು ಚುನಾಯಿಸಿಗೊಳಿಸಲು ನಾವೆಲ್ಲರೂ ಕೆಲಸ ಮಾಡಬೇಕಾಗಿದೆ. ರಾಜ್ಯದಲ್ಲಿ ಸಂಪೂರ್ಣ ಬಹುಮತದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ಇರುವುದರಿಂದ ಈ ಕ್ಷೇತ್ರದ ಅಭಿವೃದ್ಧಿಗೋಸ್ಕರ ಶ್ರಮಿಸೋಣ ಎಂದು ಕಾರ್ಯಕರ್ತರಿಗೆ ಕರೆ ಕೊಟ್ಟರು.
ಇದೇ ಸಂದರ್ಭದಲ್ಲಿ ಸಭೆಯಲ್ಲಿ ಡಾ.ಅಂಜಲಿ ನಿಂಬಾಳ್ಕರ್ ಅವರಿಗೆ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಬೇಕೆಂದು ಕಾರ್ಯಕರ್ತರು ಪಕ್ಷದ ವರಿಷ್ಠರಿಗೆ ಒತ್ತಾಯ ಮಾಡಿದರು.
ಈ ಸಂದರ್ಭದಲ್ಲಿ ಅಶೋಕ್ ಅಂಗಡಿ ಮಹಾಂತೇಶ್ ರಾಹುತ್ ಮಧು ಕವಳೆೇಕರ್ ಲಕ್ಷ್ಮಣ್ ಮದರ್ ರಾಮಚಂದ್ರ ಪಾಟೀಲ್ ರಮೇಶಗೌಡ ಪಾಟೀಲ್ ಪ್ರಮೋದ್ ಹೆಬ್ಬಾಳ್ಕರ್ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


