ಗುಬ್ಬಿ: ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.
ತಾಲ್ಲೂಕಿನ ದೊಡ್ಡಗುಣಿ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯ ಮೇಲುಸೇತುವೆಯ ಮೇಲ್ಭಾಗ ಭಾನುವಾರ ಮುಂಜಾನೆ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೆ.ಬಿ.ಕ್ರಾಸ್ ಕಡೆಯಿಂದ ಬರುತ್ತಿದ್ದ ಕಾರು ಗುಬ್ಬಿ ಕಡೆಯಿಂದ ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.ಗಾಯಾಳುವನ್ನು ತುರುವೇಕೆರೆ ತಾಲ್ಲೂಕು ಹರಿದಾಸನಹಳ್ಳಿ ಚೇತನ್ 28 ವರ್ಷ ಎಂದು ಗುರುತಿಸಲಾಗಿದೆ. ಗಾಯಾಳುವನ್ನು ಗುಬ್ಬಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೇರಿಸಲಾಗಿದೆ.
ಶನಿವಾರ ತಡರಾತ್ರಿ ಗುಬ್ಬಿ ಪಟ್ಟಣದಲ್ಲಿ ನೆಡೆದ ಮತ್ತೊಂದು ಅಪಘಾತದಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ, ಕಾರು ಸಂಪೂರ್ಣ ಜಕಂ ಗೊಂಡಿದೆ. ಬಸ್ಸು ಮತ್ತು ಕಾರಿನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.
ಗುಬ್ಬಿ ಪೊಲೀಸ್ ಎಸ್ ಐ ಮುತ್ತುರಾಜ್ ಎರಡೂ ಪ್ರಕರಣ ದಾಖಲಿಸಿಕೊಂಡು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ವರದಿ: ಮಂಜುನಾಥ್, ಗುಬ್ಬಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA