ಕ್ರೈಂ ಬ್ರಾಂಚ್ ಅಧಿಕಾರಿಗಳಂತೆ ನಟಿಸಿ ಮುಂಬೈನ ಆಭರಣ ಮಳಿಗೆಯೊಂದರಲ್ಲಿ ದರೋಡೆ ನಡೆಸಿದ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಆರೋಪಿಯಿಂದ ಸುಮಾರು 2.7 ಕೋಟಿ ಮೌಲ್ಯದ ವಜ್ರಾಭರಣ ಹಾಗೂ ಚಿನ್ನದ ಬಿಸ್ಕೆಟ್ ವಶಪಡಿಸಿಕೊಳ್ಳಲಾಗಿದೆ. ಪ್ರಕರಣದ ಇನ್ನಿಬ್ಬರು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಮಹೇಂದ್ರ ಮತ್ತು ಮನೋಜ್ ಬಂಧಿತರು. ರಾಜಸ್ಥಾನದ ರಾಜಾಸರ್-ಬಿಕಾನೇರ್ ರಸ್ತೆಯ ದೇರಾಜ್‌ಸರ್ ಬಳಿ ಅವರನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿ ಕ್ರೈಂ ಬ್ರಾಂಚ್ ಅಧಿಕಾರಿಗಳು ಎಂಬ ನೆಪದಲ್ಲಿ ಮುಂಬೈನ ಆಭರಣ ಮಳಿಗೆಯೊಂದರಲ್ಲಿ ದರೋಡೆ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ತಲೆಮರೆಸಿಕೊಂಡಿದ್ದಾರೆ. ಅವರಿಗಾಗಿ ಶೋಧ ಕಾರ್ಯ ಪ್ರಗತಿಯಲ್ಲಿದೆ.
ಅವರು ಪ್ರಯಾಣಿಸುತ್ತಿದ್ದ ವಾಹನದಿಂದ 27 ಲಕ್ಷ ರೂ., ಎರಡು ಕೆಜಿ ತೂಕದ 20 ಚಿನ್ನದ ಬಿಸ್ಕೆಟ್‌ಗಳು (ಸುಮಾರು 1.10 ಕೋಟಿ ರೂ.), 15 ಪವನ್ ವಜ್ರದ ಆಭರಣಗಳು (ರೂ. 1.25 ಕೋಟಿ ಮೌಲ್ಯ) ಮತ್ತು 18 ಲಕ್ಷ ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಂಬೈನ ಸಿಯಾನ್ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


