ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ತುಮಕೂರು ಪ್ರಾದೇಶಿಕ ಕೇಂದ್ರದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸೋಮವಾರ ತುಮಕೂರು ಪ್ರಾದೇಶಿಕ ಕೇಂದ್ರ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಬಾರಿ ಪ್ರಾದೇಶಿಕ ಕೇಂದ್ರದ ಆವರಣದಲ್ಲಿ ಕರಾಮುವಿಯ ಎಂ.ಎ. ಪ್ರಥಮ ವರ್ಷದ ಇತಿಹಾಸ ವಿದ್ಯಾರ್ಥಿಗಳಿಂದ ಸಸಿಗಳನ್ನು ನೆಡಿಸುವ ಮುಖಾಂತರ ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಕರಾಮುವಿಯ ತುಮಕೂರು ಪ್ರಾದೇಶಿಕ ಕೇಂದ್ರದ ನಿರ್ದೇಶಕರಾದ ಡಾ.ಲೋಕೇಶ ಆರ್. ಮಾತನಾಡಿ, ಈ ಆವರಣವನ್ನು ಹಸಿರೀಕರಣ ಮತ್ತು ಪ್ಲಾಸ್ಟಿಕ್ ಮುಕ್ತ ಕ್ಯಾಂಪಸ್ ಮಾಡಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರಾದೇಶಿಕ ಕೇಂದ್ರದ ಎಲ್ಲಾ ಸಿಬ್ಬಂದಿ ಹಾಗೂ ಕರಾಮುವಿಯ ಎಂ.ಎ ಪ್ರಥಮ ವರ್ಷದ ಇತಿಹಾಸ ವಿಭಾಗದ ವಿದ್ಯಾರ್ಥಿಗಳು ಹಾಜರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA