ತುಮಕೂರು ಜಿಲ್ಲೆ, ಗುಬ್ಬಿ ತಾಲೂಕು, ಚಂದ್ರಶೇಖರಪುರ ಹೋಬಳಿ, ಮಾವಿನಹಳ್ಳಿಯ ಡಾ.ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿಯಲ್ಲಿ ಸೋಮವಾರ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.
ಪ್ರಾಂಶುಪಾಲರು, ಬೋಧಕ ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಸಸಿಗಳನ್ನು ನೆಡುವುದರ ಮೂಲಕ “ವಿಶ್ವ ಪರಿಸರ ದಿನಾಚರಣೆ” ಯನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪರಿಸರ ಪ್ರಜ್ಞೆಯನ್ನು ನೀಡುವುದರ ಜೊತೆಗೆ ಪರಿಸರ ಪ್ರಜ್ಞೆಯ ಅರಿವು ಮೂಡಿಸುವ ಘೋಷಣಾ ವಾಕ್ಯವನ್ನು ಕೂಗಿಸಲಾಯಿತು. ಕಾರ್ಯಕ್ರಮವನ್ನು ಪ್ರಾಂಶುಪಾಲರಾದ ಮುರುಗಿ ಶಿಲ್ಪಾ ರವರು ಯಶಸ್ವಿಯಾಗಿ ನೆರೆವೇರಿಸಿದರು. ಕಾರ್ಯಕ್ರಮದಲ್ಲಿ ಬೋಧಕ, ಬೋಧಕೇತರ ಸಿಬ್ಬಂದಿಗಳು ಭಾಗವಹಿಸಿದ್ದರು.

ವರದಿ: ಯತೀಶ್ ಕುಮಾರ್, ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


