ಬೆಳಗಾವಿ: ಅಭಿವೃದ್ಧಿ ದೃಷ್ಟಿಯಿಂದ ಅಖಂಡ ಬೆಳಗಾವಿ ಜಿಲ್ಲಾ ವಿಭಜನೆ ಆಗಬೇಕು. ಆದರೆ ಜಿಲ್ಲೆಯ ಎಲ್ಲ ನಾಯಕರ ಸಹಮತದ ಆಧಾರದ ಮೇಲೆ ಜಿಲ್ಲಾ ವಿಭಜನೆ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ನಗರದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಮತ್ತೆ ಮುನ್ನೆಲೆಗೆ ಬಂದ ಬೆಳಗಾವಿ ಜಿಲ್ಲಾ ವಿಭಜನೆ ಕೂಗು ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು. ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ಬೆನ್ನಲ್ಲೆ ಜಿಲ್ಲಾ ವಿಭಜನೆ ಆಗಬೇಕೆಂದು ಸಚಿವೆ ಒತ್ತಾಯಿಸಿದರು.
ಮಾಜಿ ಸಚಿವ ಪ್ರಕಾಶ ಹುಕ್ಕೇರಿ, ನಾನು ಹೇಳ್ತಿದ್ದೇನೆ ಎಂಬ ಕಾರಣಕ್ಕೆ ವಿಭಜನೆ ಬೇಡ. ಜಿಲ್ಲಾ ವಿಭಜನೆ ಸಂಬಂಧ ಸರ್ಕಾರ ಮಟ್ಟದಲ್ಲಿ ಹಂತಹಂತವಾಗಿ ಚರ್ಚೆ ನಡೆಯಲಿದೆ. ಆ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ನಾಯಕರು ಕ್ರಮ ಜರುಗಿಸುತ್ತೇವೆ ಎಂದು ಹೆಬ್ಬಾಳ್ಕರ್ ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


