ನಗರದ ಪೊಲೀಸ್ ಇಲಾಖೆಯಲ್ಲಿ ಮಹಿಳೆ ಮತ್ತು ಮಕ್ಕಳ ರಕ್ಷಣೆಗಾಗಿ ರಾಣಿ ಚೆನ್ನಮ್ಮ ಪಡೆ ಹೆಸರಿನಲ್ಲಿ ತಂಡವೊಂದು ರಚನೆಯಾಗಿದೆ. ಆಗ್ನೇಯ ವಿಭಾಗ ಡಿಸಿಪಿ ಸಿಕೆ ಬಾಬ ನೇತೃತ್ವದಲ್ಲಿ ಈ ಪಡೆ ಕೆಲಸ ಮಾಡುತ್ತಿದೆ. ಈ ಹಿಂದೆ ಡಿಸಿಪಿಯಾಗಿದ್ದ ಶ್ರೀನಾಥ್ ಜೋಶಿ ಈ ಚೆನ್ನಮ್ಮ ಪಡೆಗೆ ಚಾಲನೆ ಕೊಟ್ಟಿದ್ದರು. ಸದ್ಯ ಆಗ್ನೇಯ ವಿಭಾಗದ ಡಿಸಿಪಿಯಾಗಿರುವ ಸಿಕೆ ಬಾಬ ಈ ಪಡೆಗೆ ಹೊರ ರೂಪ ಮತ್ತು ಹುರುಪು ನೀಡಿದ್ದಾರೆ.
ಪೊಲೀಸ್ ಇಲಾಖೆಯ ಮಹಿಳಾ ಸಿಬ್ಬಂದಿಗೆ ವಿಶೇಷ ತರಬೇತಿ ನೀಡಿ ಆ ಸಿಬ್ಬಂದಿಯಿಂದ ಮಹಿಳೆ ಮತ್ತು ಮಕ್ಕಳಿಗೆ ತರಬೇತಿ ನೀಡಲಾಗುತ್ತೆ. ಮಹಿಳೆಯರಿಗೆ ಆತ್ಮಸ್ಥೆರ್ಯ ತುಂಬುವ ಕೆಲಸ ಮಾಡುವ ಈ ಪಡೆಕಷ್ಟ ಅಂತಾ ಕರೆ ಮಾಡೋ ಹೆಣ್ಣು ಮಕ್ಕಳ ಸಹಾಯಕ್ಕೆ ಈ ತಂಡ ಧಾವಿಸುತ್ತದೆ. ಮಹಿಳೆಯರು ತಮ್ಮ ರಕ್ಷಣೆ ಹೇಗೆ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ತರಬೇತಿ ನೀಡಿ ದೈಹಿಕ ಸಾಮಾರ್ಥ್ಯ ಹೆಚ್ಚಿಸಿಕೊಳ್ಳುವ ಮಾರ್ಷಲ್ ಆರ್ಟ್ ನಂತಹ ಕೆಲ ಪಟ್ಟುಗಳನ್ನು ಈ ತಂಡ ಹೇಳಿಕೊಡುತ್ತದೆ. ಸುಮಾರು 40 ಸಿಬ್ಬಂದಿಗಳ ಈ ತಂಡ ಇಗಾಗ್ಗೆ 1500 ಕ್ಕೂ ಅಧಿಕ ಕಾರ್ಯಕ್ರಮಗಳನ್ನ ನಡೆಸಿದ್ದಾರೆ. ಮುಖ್ಯವಾಗಿ ಶಾಲಾ-ಕಾಲೇಜುಗಳು, ಸಾರ್ವಜನಿಕರ ಪ್ರದೇಶದಲ್ಲಿ ಕಾನೂನಿನ ಬಗ್ಗೆ ಅರಿವು ಮೂಡಿಸುವ ಈ ಪಡೆ ಪೋಕ್ಸ್, ದೌರ್ಜನ್ಯ, ಸೈಬರ್ ಕ್ರೈಂಗಳ ಬಗ್ಗೆ ಮಹಿಳೆಯರಿಗೆ ತಿಳುವಳಿಕೆ ನೀಡುತ್ತದೆ.
ಆ ಸಿಬ್ಬಂದಿಯಿಂದ ಮಹಿಳೆ ಮತ್ತು ಮಕ್ಕಳಿಗೆ ತರಬೇತಿ ನೀಡಲಾಗುತ್ತೆ. ಮುಖ್ಯವಾಗಿ ಶಾಲಾ ಕಾಲೇಜುಗಳು, ಸಾರ್ವಜನಿಕರ ಪ್ರದೇಶದಲ್ಲಿ ಕಾನೂನಿನ ಬಗ್ಗೆ ಅರಿವು ಮೂಡಿಸುವ ಈ ಪಡೆ ಪೋಕ್ಸ್, ದೌರ್ಜನ್ಯ, ಸೈಬರ್ ಕ್ರೈಂಗಳ ಬಗ್ಗೆ ಮಹಿಳೆಯರಿಗೆ ತಿಳುವಳಿಕೆ ನೀಡುತ್ತದೆ. ಮಹಿಳೆಯರಿಗೆ ವಿಶೇಷ ತರಬೇತಿ ನೀಡಲು ತಾವೇ ವಿಶೇಷ ತರಬೇತಿ ಪಡೆದಿರುವ ಮಹಿಳಾ ಸಿಬ್ಬಂದಿ ಪ್ರತ್ಯೇಕೆ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಸದ್ಯ ಈ ಪಡೆಗೆ ನಗರದಲ್ಲಿ ಪ್ರಶಂಸೆ ವ್ಯಕ್ತವಾಗಿದ್ದು ಮುಂದಿನ ದಿನಗಳಲ್ಲಿ ಎಲ್ಲಾ ವಿಭಾಗದಲ್ಲೂ ಈ ಪಡೆ ಕಾರ್ಯ ನಿರ್ವಹಿಸುವ ಸಾಧ್ಯತೆಯಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


