ಬೆಂಗಳೂರು: ವಿವಾದಿತ ಪಠ್ಯಗಳ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸಂಪೂರ್ಣ ಪಠ್ಯ ಪರಿಷ್ಕರಣೆ ಇಲ್ಲ ಎಂದು ಶಿಕ್ಷಣ ಇಲಾಖೆ ಗೆ ಸಿಎಂ ಸಿದ್ದರಾಮಯ್ಯ ಮೌಖಿಕ ಸೂಚನೆ ನೀಡಿದ್ದಾರೆನ್ನಲಾಗಿದೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಜೊತೆ ಸಿಎಂ ಮಂಗಳವಾರ ಈ ಬಗ್ಗೆ ಕೆಲಕಾಲ ಚರ್ಚೆ ನಡೆಸಿದ್ದಾರೆ. ಹೀಗಾಗಿ ಕೆಲವು ವಿವಾದಿತ ಪಠ್ಯಗಳನ್ನು ಈ ಸಾಲಿನಲ್ಲಿ ಬೋಧನೆಯಿಂದ ಕೈಬಿಡುವುದು ಬಹುತೇಕ ಫಿಕ್ಸ್ ಎನ್ನಲಾಗಿದೆ.
ಈ ಶೈಕ್ಷಣಿಕ ವರ್ಷದಲ್ಲಿ ಕೆಲ ವಿವಾದಿತ ಪಠ್ಯಗಳನ್ನು ಪಟ್ಟಿ ಮಾಡಿ ಸಲ್ಲಿಸಿ. ಸಾಹಿತ್ಯ ಮತ್ತು ಸಾಂಸ್ಕøತಿಕ ವಲಯ ಆಕ್ಷೇಪಿಸಿರುವ ಕೆಲ ಪಠ್ಯಗಳ ಪಟ್ಟಿ ಮಾಡುವಂತೆ ಸಿಎಂ ಸೂಚನೆ ನೀಡಿದ್ದಾರೆ. ಹೀಗಾಗಿ ಅಂತಹ ಕೆಲ ಪಠ್ಯಗಳನ್ನು ಮಕ್ಕಳಿಗೆ ಬೋಧನೆ ಮಾಡದಿರಲು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಒಟ್ಟಿನಲ್ಲಿ ಶಿಕ್ಷಣ ಇಲಾಖೆಯಿಂದ ವಿವಾದಿತ ಪಠ್ಯಗಳ ಪಟ್ಟಿ ಬಂದ ಬಳಿಕ ಸರ್ಕಾರ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ. ಸರ್ಕಾರದ ತೀರ್ಮಾನದ ಬಳಿಕ ವಿವಾದಿತ ಪಠ್ಯಗಳನ್ನು ಬೋಧಿಸದಂತೆ ಶಿಕ್ಷಣ ಇಲಾಖೆಯು ಶಾಲೆಗಳಿಗೆ ಸುತ್ತೋಲೆ ಹೊರಡಿಸಲಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


