ಬೆಂಗಳೂರು: 2022-23 ಮುಂಗಾರು ಹಂಗಾಮಿನಲ್ಲಿ ನೆಟೆ ರೋಗದಿಂದ ಹಾನಿಯಾದ ತೊಗರಿ ಬೆಳೆಗೆ ಮೊದಲ ಹಂತದ ಪರಿಹಾರವಾಗಿ 74 ಕೋಟಿ ರೂಪಾಯಿ ಬಿಡುಗಡೆಗೊಳಿಸಲಾಗಿದೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದ್ದಾರೆ.
2022-23ನೇ ಸಾಲಿನಲ್ಲಿ ನೆಟೆ ರೋಗದಿಂದ ಕಲಬುರಗಿ ಜಿಲ್ಲೆಯಲ್ಲಿ 198488 ಹೆಕ್ಟೇರ್, ಬೀದರ್ ಜಿಲ್ಲೆಯಲ್ಲಿ 14495 ಹೆಕ್ಟೇರ್, ವಿಜಯಪುರ ಜಿಲ್ಲೆಯಲ್ಲಿ 20401 ಹೆಕ್ಟೇರ್, ಯಾದಗಿರಿ ಜಿಲ್ಲೆಯಲ್ಲಿ 10259 ಪ್ರದೇಶದಲ್ಲಿ ತೊಗರಿ ಬೆಳೆ ಹಾನಿಯಾಗಿರುತ್ತದೆ. ಹಾನಿಗೊಳಗಾದ ರೈತರಿಗೆ ಪ್ರತಿ ಹೆಕ್ಟೇರ್ 10 ಸಾವಿರ ಪರಿಹಾರದಂತೆ ಗರಿಷ್ಠ ಎರಡು ಹೆಕ್ಟೇರ್‌ಗೆ ಸೀಮಿತಗೊಳಿಸಿ ಸರ್ಕಾರದಿಂದ 223 ಕೋಟಿಗಳ ಅನುದಾನ ಘೋಷಿಸಲಾಗಿದ್ದು, ಇದರ ಪೈಕಿ ಮೊದಲ ಹಂತದಲ್ಲಿ 1/3 ಭಾಗದಷ್ಟು, ಅಂದರೇ 74 ಕೋಟಿ ರೂಪಾಯಿ ಪರಿಹಾರ ಹಣವನ್ನು ಸಾದಿಲ್ವಾರು ನಿಧಿಯಿಂದ ಬಿಡುಗಡೆ ಮಾಡಲಾಗಿದೆ.
ನೆಟೆರೋಗದಿಂದ ತೊಗರಿ ಬೆಳೆಹಾನಿಯಿಂದ ನಷ್ಟಕ್ಕೊಳಗಾಗಿರುವ ರೈತರಿಗೆ ಪರಿಹಾರದ ಹಣ ವಿತರಿಸಲಾಗುವುದು. ಉಳಿದ ಪರಿಹಾರದ ಹಣವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಸಚಿವ ಚಲುವರಾಯಸ್ವಾಮಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


