ತುಮಕೂರು: ಲಸಿಕೆ ಹಾಕಿದ ಒಂದು ಗಂಟೆಯೊಳಗೆ ಮಗು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹೊಯ್ಸಳಕಟ್ಟೆ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ನಡೆದಿದ್ದು, ವೈದ್ಯರ ನಿರ್ಲಕ್ಷ್ಯದ ಆರೋಪ ಕೇಳಿ ಬಂದಿದೆ.
ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸೋಮನಹಳ್ಳಿ ಮೂಲದ ಮಧು ಮತ್ತು ಶೃತಿ ದಂಪತಿಯ ಮಗು ಮೃತಪಟ್ಟ ಮಗುವಾಗಿದೆ. ಚುಚ್ಚು ಮದ್ದು ಪಡೆದು ಮನೆಗೆ ತೆರಳುವ ಮಾರ್ಗ ಮಧ್ಯದಲ್ಲೇ ಮಗು ಸಾವನ್ನಪ್ಪಿದೆ.
ಘಟನೆ ಹಿನ್ನೆಲೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವು ಸಂಭವಿಸಿದೆ ಎಂದು ಆರೋಪಿಸಿ ಮಗುವಿನ ಕುಟುಂಬಸ್ಥರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನಾ ಸ್ಥಳಕ್ಕೆ ಚಿಕ್ಕನಾಯಕನಹಳ್ಳಿ ಜೆಡಿಎಸ್ ಶಾಸಕ ಸುರೇಶ್ ಬಾಬು ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದು, ಈ ಬಗ್ಗೆ ಕೂಡಲೇ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವೈದ್ಯರ ಹಾಗೂ ಸಿಬ್ಬಂದಿ ಸೇರಿ ಐವರ ವಿರುದ್ಧ ಮಗುವಿನ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಡಾ.ಮಧು, ಸಿಬ್ಬಂದಿಗಳಾದ ಸಾನಿಯಾ, ಮಮತಾ, ಶೋಭಾ, ಲಕ್ಷ್ಮೀದೇವಿ, ಚಂದ್ರಪ್ರಭಾ ವಿರುದ್ಧ ಹುಳಿಯಾರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA