ಕಲುಷಿತ ನೀರು ಕುಡಿದು ಮಕ್ಕಳು ಅಸ್ವಸ್ಥರಾದ ಘಟನೆ ಬೆಂಗಳೂರಿನ ಮಹಾವೀರ್ ರ್ಯಾನ್ಸನ್ ಅಪಾರ್ಟ್‌ಮೆಂಟ್‌ನಲ್ಲಿ ಇಂದು(ಗುರುವಾರ) ನಡೆದಿದೆ.ಒಂದೇ ಅಪಾರ್ಟ್‌ಮೆಂಟ್‌ನ ಮೂವತ್ತುಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ ಅಂತ ತಿಳಿದು ಬಂದಿದೆ.
ಕಲುಷಿತ ನೀರು ಕುಡಿದ ಪರಿಣಾಮ ಮಕ್ಕಳಲ್ಲಿ ವಾಂತಿ ಭೇದಿ ಹಾಗೂ ಜ್ವರ ಕಾಣಿಸಿಕೊಳ್ಳುತ್ತಿದೆ.ಹೀಗಾಗಿ ನಾಲ್ವರು ಮಕ್ಕಳನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಈ ಸಂಬಂಧ ಅಪಾರ್ಟ್‌ಮೆಂಟ್ ಬಿಲ್ಡರ್ಸ್ ವಿರುದ್ಧ ಸಿಂಗಸಂದ್ರ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಪರಪ್ಪನ ಆಗ್ರಹಾರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಕಲುಷಿತ ನೀರು ಸೇವನೆಯಿಂದ ಮಕ್ಕಳು ಅಸ್ವಸ್ಥರಾಗಿದ್ದಾರೆ ಅಂತ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಕಲುಷಿತ ನೀರು ಕುಡಿದು ಮಕ್ಕಳು ಅಸ್ವಸ್ಥರಾಗಿದ್ದರಿಂದ ಅಪಾರ್ಟ್‌ಮೆಂಟ್ ಬಳಿ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎರಡು ಮಕ್ಕಳನ್ನ ಹೆಚ್ಚಿನ ಚಿಕಿತ್ಸೆಗೆ ಬೆಳ್ಳಂದೂರು ಬಳಿಯ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಎರಡು ಮಕ್ಕಳಿಗೆ ಸಿಂಗಸಂದ್ರ ಪ್ರಾಥಮಿಕ ಹೊರರೋಗಿ ವಿಭಾಗದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಳಿದ ಮಕ್ಕಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ವಾಪಸ್ ಕಳುಹಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


