ತುಮಕೂರು: ಒಂದು ವರ್ಷದ ಹೆಣ್ಣು ಮಗುವನ್ನು ಬ್ಲೇಡಿನಿಂದ ಕುಯ್ದು ಮತಿಭ್ರಮನೆಯ ತಾಯಿ ತಾನು ಕೂಡ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ಪಟ್ಟಣದ ತಿಪ್ಪಾಪುರ ಛತ್ರದ ಬಳಿ ನಡೆದಿದೆ.
ಶ್ವೇತಾ (28) ಎಂಬಾಕೆಯಿಂದ ಕೃತ್ಯ ನಡೆದಿದೆ. ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೈಯನ್ನು ಕುಯ್ದಿ ನಂತರ
ತೀವ್ರ ರಕ್ತ ಸಾವ್ರವಾಗಿ ಮಗು ಸಾವನಪ್ಪಿದೆ. ಒಂದು ವರ್ಷದ ಕ್ರಿತೀಶ್ ಮೃತ ಮಗು ರಕ್ತದ ಮಡುವಿನಲ್ಲಿ ಮೃತಪಟ್ಟಿದೆ.
ಬಳಿಕ ತಾನು ಕೂಡ ಕುತ್ತಿಗೆ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಶ್ವೇತಾ ರನ್ನು ಅಕ್ಕಪಕ್ಕದ ಮನೆಯವರು ಗಮನಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಸಂಬಂಧ ಮಧುಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮಧುಗಿರಿ ನಿವಾಸಿ ಶಿವಾನಂದ ಎಂಬುವ ಪತ್ನಿಯಾಗಿದ್ದ ಶ್ವೇತಾ ಮಾನಸಿಕ ಅಸ್ವಸ್ಥೆಯಾಗಿದ್ದರು, ಇತ್ತೀಚೆಗಷ್ಟೇ ಬೆಂಗಳೂರಿನ ನಿಮ್ಹಾನ್ಸ್ ನಲ್ಲಿ ಚಿಕಿತ್ಸೆ ಪಡೆದು ಮನೆಗೆ ಬಂದಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA