ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಕೃತಜ್ಞತಾ ಸಮಾವೇಶ ಹಮ್ಮಿಕೊಂಡಿದ್ದಾರೆ. ವರುಣ ಕ್ಷೇತ್ರದ ಜನತೆಗೆ ನಂಜನಗೂಡು ತಾಲೂಕಿನ ಬಿಳಿಗೆರೆಯಲ್ಲಿ ಸಮಾವೇಶ ನಡೆಸಲಿದ್ದಾರೆ.
ಬೆಳಗ್ಗೆ 11.30 ಬೆಂಗಳೂರಿನಿಂದ ತೆರಳುವ ಸಿಎಂ ಸಿದ್ದರಾಮಯ್ಯ, ಮಧ್ಯಾಹ್ನ 12.20ಕ್ಕೆ ಸುತ್ತೂರು ಹೆಲಿಪ್ಯಾಡ್ಗೆ ತಲುಪಲಿದ್ದಾರೆ. ಮಧ್ಯಾಹ್ನ 12.35ಕ್ಕೆ ಕೃತಜ್ಞತಾ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಸಮಾವೇಶ ಬಳಿಕ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ. ನಂತರ ಹೆಲಿಕ್ಯಾಪ್ಟರ್ ಮೂಲಕ ಮೈಸೂರಿಗೆ ಆಗಮಿಸಿ ಸಂಜೆ 4 ಗಂಟೆಗೆ ಅಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ. ರಾತ್ರಿ ಮೈಸೂರಿನಲ್ಲೇ ವಾಸ್ತವ್ಯ ಹೋಡಿ ಜೂ.11ರ ಬೆಳಗ್ಗೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


