ತುಮಕೂರು: ಮನೆಗೆ ನುಗ್ಗಿ ಯುವತಿಯೊಬ್ಬಳನ್ನು ಯುವಕನೊಬ್ಬ ಕುತ್ತಿಗೆ ಕೊಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತುಮಕೂರು ನಗರದ ವಿದ್ಯಾನಗರದಲ್ಲಿ ನಡೆದಿದೆ.
ವೀಣಾ (23) ಕೊಲೆಯಾದ ದುರ್ದೈವಿಯಾಗಿದ್ದಾರೆ. ವೀಣಾಳ ಪ್ರಿಯಕರನೆ ಕೊಲೆ ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯ ತುರುವೇಕೆರೆ ತಾಲೂಕಿನ ಹುಲೆಕೆರೆ ಗ್ರಾಮದ ನಿವಾಸಿಯಾಗಿರುವ ವೀಣಾ ತುಮಕೂರಿನ ವಿದ್ಯಾನಗರದಲ್ಲಿ ಸ್ನೇಹಿತೆಯರೊಂದಿಗೆ ವಾಸ ಮಾಡುತ್ತಿದ್ದಳು.
ತುಮಕೂರಿನ ಇಂಡಸ್ಟ್ರಿಯಲ್ ಏರಿಯಾದಲ್ಲಿ ಇರುವಂತಹ ಇನ್ ಕ್ಯಾಪ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ಇಂದು ಕಚೇರಿಗೆ ಹೋಗುವ ಮುನ್ನ ವೀಣಾ ವಾಸವಾಗಿದ್ದ ಮನೆಗೆ ನುಗ್ಗಿ ಆರೋಪಿ ಕತ್ತು ಕೊಯ್ದು ಪರಾರಿಯಾಗಿದ್ದಾನೆ. ಈ ಸಂಬಂಧ ಹೊಸಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy