ಅಮೆರಿಕದ ಕಾನ್ಸಾಸ್ ನಗರದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಒಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ. ದಾಳಿಯಲ್ಲಿ ಬಲಿಯಾದವರಲ್ಲಿ ಒಬ್ಬ ಪೊಲೀಸ್ ಅಧಿಕಾರಿಯೂ ಸೇರಿದ್ದಾರೆ. ಮಾರ್ಸೆಲ್ ಟಿ ನೆಲ್ಸನ್ (42) ಮತ್ತು ಕ್ರಿಸ್ಟನ್ ಫೇರ್‌ಚೈಲ್ಡ್ (42) ಮೃತಪಟ್ಟವರು.
ಪೂರ್ವ ಕಾನ್ಸಾಸ್ ಸಿಟಿಯ ಮೆಕ್ ಡೊನಾಲ್ಡ್ ರೆಸ್ಟೋರೆಂಟ್ ಬಳಿ ರಾತ್ರಿ 9 ಗಂಟೆ ಸುಮಾರಿಗೆ ಗುಂಡಿನ ದಾಳಿ ನಡೆದಿದೆ. ಘಟನಾ ಸ್ಥಳದಿಂದ ಗನ್ ವಶಪಡಿಸಿಕೊಳ್ಳಲಾಗಿದೆ. ಘಟನೆಯ ಕುರಿತು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದೇ ವೇಳೆ ಸ್ವೀಡನ್ ನಲ್ಲೂ ಗುಂಡಿನ ದಾಳಿ ನಡೆದಿದೆ. ದಾಳಿಯಲ್ಲಿ 15 ವರ್ಷದ ಯುವಕ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ದಾಳಿಗೆ ಕಾರಣ ಸ್ಪಷ್ಟವಾಗಿಲ್ಲ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


