ನಗರದ ಕಂಪನಿಗಳಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ ಹೊರ ರಾಜ್ಯಗಳಿಂದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ಜಾಲಕ್ಕೆ ತಳ್ಳಿದ್ದ9 ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
‘ಜ್ಞಾನಭಾರತಿ ಠಾಣೆ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲದ ಬಗ್ಗೆ ಮಾಹಿತಿ ಬಂದಿತ್ತು. ಮೂರು ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿ 9 ಆರೋಪಿಗಳನ್ನು ಬಂಧಿಸಲಾಗಿದೆ. ದೆಹಲಿ, ಮುಂಬೈ, ಪಶ್ಚಿಮ ಬಂಗಾಳ, ಮಧ್ಯಪ್ರದೇಶದ 26 ಯುವತಿಯರನ್ನು ರಕ್ಷಿಸಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.
ಮಧ್ಯವರ್ತಿಗಳ ಮೂಲಕ ಹೊರ ರಾಜ್ಯಗಳಿಂದ ಯುವತಿಯರನ್ನು ನಗರಕ್ಕೆ ಕರೆಸಲಾಗಿತ್ತು.ಪೇಯಿಂಗ್ ಗೆಸ್ಟ್ ಕಟ್ಟಡಗಳಲ್ಲಿ ಯುವತಿಯರನ್ನು ಇರಿಸಲಾಗಿತ್ತು.ಮೊಬೈಲ್ ಮೂಲಕ ಗ್ರಾಹಕರನ್ನು ಸಂಪರ್ಕಿಸುತ್ತಿದ್ದ ಆರೋಪಿಗಳು, ಅವರಿಂದ ಹಣ ಪಡೆದು ಹೇಳಿದ ಸ್ಥಳಕ್ಕೆ ಯುವತಿಯರನ್ನು ಕಳುಹಿಸುತ್ತಿದ್ದರು ಎಂದು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


