nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿ ಸಲ್ಲಿಸಬಹುದು?

    July 2, 2026

    ತಲೆಗೆ ಬಿದ್ದ ಏಟು: ಜು.5ರಂದು ಕೃತಿ ಬಿಡುಗಡೆ

    July 2, 2026

    ನಾಯಿಯನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಚಿರತೆ; ಅರಣ್ಯ ಇಲಾಖೆ ಬೋನಿಗೆ ಸೆರೆ

    July 2, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿ ಸಲ್ಲಿಸಬಹುದು?
    • ತಲೆಗೆ ಬಿದ್ದ ಏಟು: ಜು.5ರಂದು ಕೃತಿ ಬಿಡುಗಡೆ
    • ನಾಯಿಯನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಚಿರತೆ; ಅರಣ್ಯ ಇಲಾಖೆ ಬೋನಿಗೆ ಸೆರೆ
    • ತುಮಕೂರಿನ ಹಿರಿಯ ಪತ್ರಕರ್ತ ಎಂ.ಈಶ್ವರ್ ಅನಾರೋಗ್ಯದಿಂದ ನಿಧನ
    • ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಕೃಷಿ ಇಲಾಖೆ ಮನವಿ
    • ನನೆಗುದಿಗೆ ಬಿದ್ದಿದ್ದ ರೈಲ್ವೆ ಕಾಮಗಾರಿ ಪ್ರಾರಂಭ: ಆಂಧ್ರಪ್ರದೇಶದ ರಾಯದುರ್ಗದಿಂದ ಕರ್ನಾಟಕದ ಪಾವಗಡವರೆಗೆ ಕಾಮಗಾರಿ ಪೂರ್ಣ
    • ತುಮಕೂರು: ಕಳ್ಳತನ, ಮಾದಕ ವಸ್ತುಗಳ ಮಾರಾಟ, ಕಚ್ಚಾ ಬಾಂಬ್ ಪ್ರಕರಣ: 9 ಮಂದಿ ಆರೋಪಿಗಳ ಬಂಧನ
    • ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಕಾರ ಬಡವರ ಜೇಬಿಗೆ ಆರ್ಥಿಕ ಶಕ್ತಿ ತುಂಬಿಸುವುದೇ ಸರಕಾರದ ಧ್ಯೇಯ: ಸಿಎಂ ಸಿದ್ದರಾಮಯ್ಯ
    ರಾಜ್ಯ ಸುದ್ದಿ June 11, 2023

    ಸರಕಾರ ಬಡವರ ಜೇಬಿಗೆ ಆರ್ಥಿಕ ಶಕ್ತಿ ತುಂಬಿಸುವುದೇ ಸರಕಾರದ ಧ್ಯೇಯ: ಸಿಎಂ ಸಿದ್ದರಾಮಯ್ಯ

    By adminJune 11, 2023No Comments3 Mins Read
    siddaramaiah

    ಬೆಂಗಳೂರು : ಸರಕಾರದ ಮಹತ್ವಾಕಾಂಕ್ಷಿ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ರಾಜ್ಯಾದ್ಯಂತ ಮಹಿಳೆಯರ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ‘ಶಕ್ತಿ’ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದದ ಪೂರ್ವದ್ವಾರ(ಗ್ರ್ಯಾಂಡ್‍ಸ್ಟೇಪ್ಸ್)ದ ಬಳಿ ಭಾನುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಚಾಲನೆ ನೀಡಿದರು.

    ಇದೇ ಸಂದರ್ಭದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಸಹ ಶಕ್ತಿ ಯೋಜನೆಗೆ ಚಾಲನೆ ನೀಡಿದರು.

    ಈ ಯೋಜನೆ ಜಾರಿಗೊಳಿಸುವುದರ ಮೂಲಕ ಮಹಿಳಾ ಸಬಲೀಕರಣದತ್ತ ಸರಕಾರ ದಿಟ್ಟ ಹೆಜ್ಜೆ ಇರಿಸಿದೆ.

    ಸಾಮಾಜಿಕ,ಆರ್ಥಿಕವಾಗಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಶತಶತಮಾನಗಳಿಂದ ಅವಕಾಶವಂಚಿತರಾಗಿದ್ದ ಮಹಿಳೆಯರಿಗೆ ಈ ಮೂಲಕ ಶಕ್ತಿ ತುಂಬುವ ಮತ್ತು ಅವರ ಕನಸುಗಳಿಗೆ ಪ್ರೋತ್ಸಾಹಿಸುವ ಕೆಲಸವನ್ನು ಸರಕಾರ ಮಾಡಿದೆ.

    ವಿನೂತನ ‘ಶಕ್ತಿ’ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶಕ್ತಿ ಇಲ್ಲದ ಅಶಕ್ತ ಜನರಿಗೆ ಶಕ್ತಿ ಕೊಡಬೇಕು ಎನ್ನುವುದು ನಮ್ಮ ಸರಕಾರದ ಧ್ಯೇಯ;   ಶತಶತಮಾನಗಳಿಂದ ಮಹಿಳೆಯರು ಅವಕಾಶವಂಚಿತರಾಗಿದ್ದಾರೆ. ಯಾವುದೇ ಸಮಾಜ ಅಭಿವೃದ್ಧಿ ಪಥದಲ್ಲಿ ಸಾಗಲು ಪುರುಷರಷ್ಟೇ ಮಹಿಳೆಯರು ಅಭಿವೃದ್ಧಿಯಲ್ಲಿ ಪಾಲ್ಗೊಳ್ಳಬೇಕು. ಈ ನಿಟ್ಟಿನಲ್ಲಿ ನಮ್ಮ ಸರಕಾರ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡುವುದರ ಮೂಲಕ  ‘ಶಕ್ತಿ’ ತುಂಬುವ ಕೆಲಸವನ್ನು   ಮಾಡುತ್ತಿದೆ ಎಂದರು.

    ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್‍ಗಳನ್ನು 3 ತಿಂಗಳೊಳಗೆ ಉಚಿತವಾಗಿ ಒದಗಿಸಲಾಗುವುದು;ಅಲ್ಲಿವರೆಗೆ ಸರಕಾರದ ಯಾವುದಾದರೊಂದು ಗುರುತಿನ ಚೀಟಿ ತೋರಿಸಿ ಉಚಿತವಾಗಿ ರಾಜ್ಯಾದ್ಯಂತ ಪ್ರಯಾಣಿಸಬಹುದಾಗಿದೆ. ಚುನಾವಣೆ ಸಂದರ್ಭದಲ್ಲಿ ನಾವು ಘೋಷಿಸಿದ 5 ಗ್ಯಾರಂಟಿಗಳ ಪೈಕಿ ನಾಲ್ಕು ಗ್ಯಾರಂಟಿಗಳು ಮಹಿಳೆಯರಿಗೆ ಮತ್ತು ಮಹಿಳಾ ಸಬಲೀಕರಣಕ್ಕೆ ಸಂಬಂಧಿಸಿದವುಗಳಾಗಿವೆ. ಈ ಒಟ್ಟು 5 ಗ್ಯಾರಂಟಿಗಳ ಅನುಷ್ಠಾನಕ್ಕೆ ಒಟ್ಟು 59 ಸಾವಿರ ಕೋಟಿ ರೂ.ಗಳ ಅಗತ್ಯವಿದ್ದು, ಎಷ್ಟೇ ಕಷ್ಟ ಬರಲಿ ಐದು ಗ್ಯಾರಂಟಿಗಳನ್ನು ಈಡೇರಿಸುತ್ತೇವೆ. ಈ ಯೋಜನೆಗಳಲ್ಲಿ ಯಾವ ಮಧ್ಯವರ್ತಿಗಳಿಲ್ಲ ಎಂದರು.

    ಭಾರತದಲ್ಲಿ ಶೇ.24ರಷ್ಟು ಮಹಿಳೆಯರು ಸಾರ್ವಜನಿಕ ಕ್ಷೇತ್ರದಲ್ಲಿ ಭಾಗಿ: 2022ರ ವಿಶ್ವಬ್ಯಾಂಕ್‍ನ ಅಂಕಿ ಅಂಶಗಳಂತೆ ಅಮೆರಿಕಾದಲ್ಲಿ ಶೇ.57ರಷ್ಟು,ಚೀನಾದಲ್ಲಿ ಶೇ.54ರಷ್ಟು, ಆಸ್ಟೇಲಿಯಾದಲ್ಲಿ ಶೇ.65,ಇಂಡೋನೇಷಿಯಾದಲ್ಲಿ ಶೇ.53ರಷ್ಟು ಹಾಗೂ ನಮ್ಮ ದೇಶದ ಪಕ್ಕದ ಬಾಂಗ್ಲಾದೇಶದಲ್ಲಿ ಶೇ.38ರಷ್ಟು ಮಹಿಳೆಯರು ಸಾರ್ವಜನಿಕ ಕ್ಷೇತ್ರದಲ್ಲಿ ಭಾಗಿಯಾಗುತ್ತಿದ್ದು, ಭಾರತದಲ್ಲಿ ಶೇ.24ರಷ್ಟು ಮಹಿಳೆಯರು ಮಾತ್ರ ಪಾಲ್ಗೊಳ್ಳುತ್ತಿದ್ದಾರೆ ಎಂದು ತಿಳಿಸಿದ ಸಿಎಂ ಸಿದ್ದರಾಮಯ್ಯ ಅವರು ಈ ಪ್ರಮಾಣವನ್ನು ಹೆಚ್ಚಿಸುವ ಮೂಲಕ ಅವರನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ ಈ ಶಕ್ತಿ ಯೋಜನೆ ಜಾರಿಗೆ ತರಲಾಗಿದೆ ಎಂದರು.

    ಎಷ್ಟು ಹಣ ಖರ್ಚು ಮಾಡುತ್ತಾ ಇದ್ದೀವಿ ಎನ್ನುವುದು ಮುಖ್ಯವಲ್ಲ;ಯಾರಿಗೆ ಕೊಡ್ತಾ ಇದ್ದೇವೆ ಎನ್ನುವುದು ಮುಖ್ಯ ಎಂದು ಹೇಳಿದ ಸಿಎಂ ಸಿದ್ದರಾಮಯ್ಯ ಅವರು ಗೃಹಜ್ಯೋತಿ ಯೋಜನೆ,ಅನ್ನಭಾಗ್ಯ ಯೋಜನೆ ಜುಲೈ 1ರಿಂದ ಜಾರಿಗೊಳಿಸಲಾಗುತ್ತದೆ. ಗೃಹಲಕ್ಷ್ಮೀ ಯೋಜನೆ ಆಗಸ್ಟ್ 16ರಂದು ಜಾರಿಗೊಳಿಸಲಾಗುತ್ತದೆ ಮತ್ತು ಯುವನಿಧಿಗೆ ಅರ್ಜಿ ಆಹ್ವಾನಿಸಲಾಗುತ್ತದೆ ಎಂದರು.

    10 ಕೆ.ಜಿ ಆಹಾರಧಾನ್ಯವನ್ನು ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್‍ದಾರರಿಗೆ ನೀಡುತ್ತೇವೆ;ಇದಕ್ಕೆ ರಾಜ್ಯದಲ್ಲಿ 10100 ಕೋಟಿ ರೂ. ಖರ್ಚಾಗಲಿದೆ. ಯಾರು ಕೂಡ ಹಸಿವಿನಿಂದ ಬಳಲಬಾರದು;ಹಸಿವು ಮುಕ್ತ ರಾಜ್ಯ ನಮ್ಮದಾಗಬೇಕು ಎಂಬ ಸದಾಶಯ ಇದರ ಹಿಂದಿದೆ ಎಂದರು.

    ಗೇಲಿ,ಕುಹಕ ಮಾಡುವವರು ಮಾಡಲಿ;ಡೊಂಟ್ ಕೇರ್: ರೈತರ ಸಾಲಮನ್ನಾ ಮಾಡದೇ ಬಂಡವಾಳಶಾಹಿಗಳ ಸಾಲಮನ್ನಾ ಮಾಡುವವರು ಸರಕಾರ ಯಾವ ರೀತಿ ಕಾರ್ಯನಿರ್ವಹಿಸುತ್ತದೇ ಎಂಬುದರ ಕುರಿತು ಪರಿಜ್ಞಾನವಿಲ್ಲದೇ ತರ್ಕರಹಿತವಾಗಿ ಎಡಬಿಡಂಗಿತನದ ರೂಪದಲ್ಲಿ ವಿರೋಧಪಕ್ಷಗಳು ಮಾತನಾಡುತ್ತಿದ್ದು, ಅವುಗಳಿಗೆ ಸೊಪ್ಪು ಹಾಕದೇ ಮತ್ತು ವಿಚಲಿತರಾಗದೇ ಎಲ್ಲ ಜಾತಿಯಲ್ಲಿರುವ, ಎಲ್ಲ ಧರ್ಮದಲ್ಲಿರುವ ಬಡವರಿಗೆ,ಸಾಮಾಜಿಕವಾಗಿ,ಆರ್ಥಿಕವಾಗಿ ಶಕ್ತಿ ತುಂಬುವ ಕೆಲಸವನ್ನು ಸರಕಾರ ಮಾಡುತ್ತಿದೆ ಎಂದರು.

    ಯೋಜನೆಯ ಲಾಭ ಪಡೆದುಕೊಳ್ಳಿ: ಹೆಣ್ಮಕ್ಕಳು ಇಂದು ಒಂದುಗಂಟೆಯಿಂದ ಸೌಲಭ್ಯವನ್ನು ಬಳಕೆ ಮಾಡಿಕೊಳ್ಳಬೇಕು.ಎಲ್ಲ ಮಹಿಳೆಯರಿಗೂ ಸ್ಮಾರ್ಟ್ ಕಾರ್ಡ್‍ಗಳನ್ನು ನೀಡಲಾಗುವುದು. ಈ ಯೋಜನೆ ವಿದ್ಯಾರ್ಥಿನಿಯರಿಗೆ ಅನ್ವಯವಾಗುತ್ತದೆ. ಈ ಯೋಜನೆಯಲ್ಲಿ ಮಧ್ಯವರ್ತಿಗಳಲ್ಲಿ ನೇರವಾಗಿ ಫಲಾನುಭವಿಗಳಿಗೆ ತಲುಪುತ್ತದೆ ಎಂದರು.

    ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಅವರು ಮಾತನಾಡಿ, ಟೀಕೆಗಳು ಸಾಯುತ್ತವೆ ಕೆಲಸಗಳು ಉಳಿಯುತ್ತವೆ ಎನ್ನುವ ಧ್ಯೇಯದೊಂದಿಗೆ ಟೀಕೆಗಳಿಗೆ ಯಾವುದೇ ರೀತಿಯ ಉತ್ತರ ನೀಡದೇ ರಾಜ್ಯದ ಜನರಿಗೆ ನಾವು ನೀಡಿದ ಭರವಸೆಗಳನ್ನು ಈಡೇರಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದೇವೆ ಎಂದರು.

    ಒಂದು ದೇಶ,ರಾಜ್ಯದ ಸ್ಥಿತಿಗತಿ ಹೇಗಿದೆ ಎಂಬುದರ ಅಧ್ಯಯನ ಮಾಡಬೇಕಿದ್ದರೇ ಅಲ್ಲಿನ ಮಹಿಳೆಯರ ಸ್ಥಿತಿಗತಿ ಅರಿತುಕೊಳ್ಳುವುದು ಅವಶ್ಯ ಎಂದು ಹೇಳಿದ ಡಿಸಿಎಂ ಡಿಕೆಶಿ ಅವರು ಈ ಯೋಜನೆಯ ಮೂಲಕ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಮಾಡಲಾಗುತ್ತಿದೆ ಎಂದರು.

    ಮಹಿಳಾ ಪ್ರಯಾಣಿಕರ ಲೆಕ್ಕದ ಉದ್ದೇಶದಿಂದ ಸ್ಮಾರ್ಟ್ ಕಾರ್ಡ್‍ಗಳನ್ನು ನೀಡಲಾಗುತ್ತಿದೆ ಎಂದು ಅವರು ಹೇಳಿದರು.

    ಸಾರಿಗೆ,ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಶಿವಾಜಿನಗರ ಕ್ಷೇತ್ರದ ಶಾಸಕರಾದ ರಿಜ್ವಾನ್ ಅರ್ಷದ್ ಅವರು ಮಾತನಾಡಿದರು.

    ಇದೇ ವೇಳೆ ಗುಲಾಬಿ ಬಣ್ಣದ ಸ್ಮಾರ್ಟ್ ಕಾರ್ಡ್,ಶಕ್ತಿ ಯೋಜನೆಯ ಲಾಂಛನವನ್ನು ಮುಖ್ಯಮಂತ್ರಿಗಳು ಅನಾವರಣಗೊಳಿಸಿದರು.

    ಇದೇ ಸಂದರ್ಭದಲ್ಲಿ ಸಾಂಕೇತಿಕವಾಗಿ ಸುಮಿತ್ರಾ,ರಾಧಿಕಾ,ಪ್ರೇಮಾ, ಕಲಾವತಿ,ಪವಿತ್ರಾ ಅವರಿಗೆ ಮುಖ್ಯಮಂತ್ರಿಗಳು ಸ್ಮಾರ್ಟ್ ಕಾರ್ಡ್‍ಗಳನ್ನು ನೀಡಿದರು.

    ಈ ಸಂದರ್ಭದಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧುಬಂಗಾರಪ್ಪ,ಕರ್ನಾಟಕ ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ , ಶಾಸಕರು, ನಿವೃತ್ತ ಐಎಎಸ್ ಅಧಿಕಾರಿ ಶ್ರೀನಿವಾಸಮೂರ್ತಿ ಸೇರಿದಂತೆ ಹಿರಿಯ ಐಎಎಸ್ ಅಧಿಕಾರಿಗಳು ಮತ್ತಿತರರು ಇದ್ದರು.

    ನಂತರ ಬಿಎಂಟಿಸಿ ಬಸ್  ಸಂಖ್ಯೆ: ಕೆ.ಎ 57 ಎಫ್ 5324 ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ  ಇಲಾಖೆಯ ಅಧಿಕಾರಿಗಳೊಂದಿಗೆ  ವಿಧಾನಸೌಧದಿಂದ ಹೋಟಲ್ ಕ್ಯಾಪಿಟಲ್, ರಾಜಭವನ ರಸ್ತೆ, ಮಹಾರಾಣಿ ಕಾಲೇಜ್ ಬಳಿ ಇರುವ ಅಂಡರ್ ಪಾಸ್  ರಸ್ತೆ,  ಮೈಸೂರು ಬ್ಯಾಂಕ್ ಸರ್ಕಲ್, ಕೆ.ಜಿ ರೋಡ್  ಮೂಲಕ ಕೆಂಪೇಗೌಡ (ಮೆಜೆಸ್ಟಿಕ್) ಬಸ್‍ನಿಲ್ದಾಣಕ್ಕೆ  ತಲುಪಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ  ಶೂನ್ಯ ಟಿಕೆಟ್ ನೀಡಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


    Provided by
    Provided by
    admin
    • Website

    Related Posts

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!

    June 30, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಉದ್ಯೋಗ

    ತುಮಕೂರು: ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿ ಸಲ್ಲಿಸಬಹುದು?

    July 2, 2026

    ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ಇಂಗ್ಲಿಷ್ ಅಧ್ಯಯನ ಮತ್ತು ಸಂಶೋಧನ ವಿಭಾಗದಲ್ಲಿ ಐಸಿಎಸ್‌ ಎಸ್‌ ಆರ್–ಪ್ರಾಯೋಜಿತ ಸಂಶೋಧನ ಯೋಜನೆಗೆ ಸಂಶೋಧನ ಸಹಾಯಕರ…

    ತಲೆಗೆ ಬಿದ್ದ ಏಟು: ಜು.5ರಂದು ಕೃತಿ ಬಿಡುಗಡೆ

    July 2, 2026

    ನಾಯಿಯನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಚಿರತೆ; ಅರಣ್ಯ ಇಲಾಖೆ ಬೋನಿಗೆ ಸೆರೆ

    July 2, 2026

    ತುಮಕೂರಿನ ಹಿರಿಯ ಪತ್ರಕರ್ತ ಎಂ.ಈಶ್ವರ್ ಅನಾರೋಗ್ಯದಿಂದ ನಿಧನ

    July 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.