nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ

    February 21, 2026

    ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಖಾಯಂಗೆ ಒತ್ತಾಯಿಸಿ ಪ್ರತಿಭಟನೆ

    February 21, 2026

    ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ

    February 21, 2026
    Facebook Twitter Instagram
    ಟ್ರೆಂಡಿಂಗ್
    • ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ
    • ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಖಾಯಂಗೆ ಒತ್ತಾಯಿಸಿ ಪ್ರತಿಭಟನೆ
    • ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ
    • ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
    • ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
    • ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹಿಳೆಯರು  ಶಕ್ತಿ ಯೋಜನೆಯನ್ನು ಸ್ವಾವಲಂಬಿ ಜೀವನಕ್ಕೆ ಸದ್ಬಳಕೆ ಮಾಡಿಕೊಳ್ಳಿ: ತಹಶೀಲ್ದಾರ್ ಮುನಿಸ್ವಾಮಿ ರೆಡ್ಡಿ
    ಕೊರಟಗೆರೆ June 11, 2023

    ಮಹಿಳೆಯರು  ಶಕ್ತಿ ಯೋಜನೆಯನ್ನು ಸ್ವಾವಲಂಬಿ ಜೀವನಕ್ಕೆ ಸದ್ಬಳಕೆ ಮಾಡಿಕೊಳ್ಳಿ: ತಹಶೀಲ್ದಾರ್ ಮುನಿಸ್ವಾಮಿ ರೆಡ್ಡಿ

    By adminJune 11, 2023No Comments1 Min Read
    ksrtc

    ಕೊರಟಗೆರೆ: ನಮ್ಮ ದೇಶಕ್ಕೆ ದೊಡ್ಡ ಶಕ್ತಿ ಎಂದರೆ ಸ್ತ್ರೀಯರು, ಸ್ತ್ರೀಯರನ್ನು ನಾವುಗಳು ದೇವತೆಯ ರೂಪದಲ್ಲಿ ಕಾಣುತ್ತೇವೆ, ಶಕ್ತಿ ಯೋಜನೆಯು ಅತ್ಯದ್ಭುತ ಯೋಜನೆ ಎಂದು ತಹಸಿಲ್ದಾರ್ ಮುನಿಸ್ವಾಮಿ ರೆಡ್ಡಿ ತಿಳಿಸಿದರು. 

    ಪಟ್ಟಣದ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಭಾನುವಾರ ಏರ್ಪಡಿಸಲಾದ ರಾಜ್ಯ ಸರ್ಕಾರದ ಶಕ್ತಿ ಯೋಜನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.  


    Provided by
    Provided by

    ಸ್ತ್ರೀಯರನ್ನು ಭೂತಾಯಿ, ತಾಯಿಯ ರೂಪದಲ್ಲಿ ಪೂಜಿಸುತ್ತೇವೆ, ಪ್ರತಿಯೊಬ್ಬರ ಬಾಳಿನಲ್ಲೂ ಹೆಣ್ಣಿನ ಪಾತ್ರ ಪ್ರಮುಖವಾಗಿರುತ್ತದೆ. ಹೆಣ್ಣು ತನ್ನ ಮಗುವಿಗೆ ಪ್ರಾಥಮಿಕ ಶಿಕ್ಷಣವನ್ನು ಗರ್ಭದಲ್ಲೇ ನೀಡಿ, ಪ್ರಪಂಚಕ್ಕೆ ತಮ್ಮನ್ನು ಪರಿಚಯಿಸಿ ಜೀವನಕ್ಕೆ ದಾರಿದೀಪವಾಗಿ ನಿಂತಿರುತ್ತಾರೆ ಎಂದು ಹೇಳಿದರು.  

    ರಾಜ್ಯ ಸರ್ಕಾರ ನೀಡಿದ ಭರವಸೆಯಂತೆ ಗ್ಯಾರಂಟಿ ಯೋಜನೆಯಲ್ಲಿ ಪ್ರಮುಖವಾದ ಶಕ್ತಿ ಯೋಜನೆ ಜಾರಿಗೆ ತಂದು ರಾಜ್ಯದಲ್ಲಿ ಮಹಿಳೆಯರಿಗೆ ಸರ್ಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣದ ವ್ಯವಸ್ಥೆ ಕಲ್ಪಿಸಿ ವಿಶೇಷ ಗೌರವ ಸೂಚಿಸಿರುವುದು ನಿಜಕ್ಕೂ ಹೆಮ್ಮೆಯ ವಿಚಾರ, ಸರ್ಕಾರದ ನಿಯಮವನ್ನು ಪಾಲಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಮಹಿಳೆಯರು ತಮ್ಮ ಸ್ವಾವಲಂಬಿ ಜೀವನಕ್ಕೆ ಸದ್ಬಳಕೆ ಮಾಡಿಕೊಳ್ಳಿ ಎಂದರು.             

    ಕೃತಜ್ಞತೆ ಸಲ್ಲಿಸಿದ ಮಹಿಳೆಯರು:                        

     ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ವಿಧಾನಸಭಾ ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಮಹಿಳೆಯರಿಗೆ ಶಕ್ತಿ ಯೋಜನೆಯ ಮುಖಾಂತರ ರಾಜ್ಯದಲ್ಲಿ ಸಾರಿಗೆ ಬಸ್ ನಲ್ಲಿ ಉಚಿತ ಪ್ರಯಾಣದ ವ್ಯವಸ್ಥೆ ಕಲ್ಪಿಸಿ ಮಹಿಳೆಯರಿಗೆ ವಿಶೇಷ ಗೌರವವನ್ನು ಸೂಚಿಸಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು.

    ಈ ಸಂದರ್ಭದಲ್ಲಿ ತಾ.ಪಂ ಇಓ ದೊಡ್ಡ ಸಿದ್ದಯ್ಯ, ಪಟ್ಟಣ ಪಂಚಾಯಿತಿ ಸದಸ್ಯರಾದ ಓಬಳರಾಜು,  ನಾಗರಾಜು, ನಂದೀಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶ್ವಥ್ ನಾರಾಯಣ್, ಅರಕೆರೆ ಶಂಕರ್, ಪಪಂ ಮಾಜಿ ಅಧ್ಯಕ್ಷ ಸೈಫುಲ್ಲಾ, ಮೈಲಾರಪ್ಪ, ಘಟಕದ ವ್ಯವಸ್ಥಾಪಕ ನಟರಾಜ್, ಕಾನೂನು ಅಧಿಕಾರಿ ಸವಿತಾ, ರಾಜಶೇಖರ್, ವಸಂತಕುಮಾರ್, ಪೋಲಿಸ್ ಇಲಾಖೆಯ ಎ ಎಸ್ ಐ ಮಂಜುನಾಥ್ ಸೇರಿದಂತೆ ಇತರರು ಇದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.,  ಕೊರಟಗೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ

    February 21, 2026

    ತುಮಕೂರು: ಮರಳೇನಹಳ್ಳಿ ಗೋಮಾಳದಲ್ಲಿರುವ ಹಿಂದುಳಿದ ನಾಗರಿಕರ ಹಿತರಕ್ಷಣಾ ಸಮಿತಿಯಿಂದ ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ನಂ 1ರ ಮರಳೇನಹಳ್ಳಿ ಗೋಮಾಳದಲ್ಲಿ…

    ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಖಾಯಂಗೆ ಒತ್ತಾಯಿಸಿ ಪ್ರತಿಭಟನೆ

    February 21, 2026

    ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.