ದೇಶದಲ್ಲಿ ಧರ್ಮ ಯಾರ ಸ್ವತ್ತು ಅಲ್ಲ ಆದರೆ ಇತ್ತೀಚಿನ ದಿನಗಳಲ್ಲಿ ನಮ್ಮ ಸ್ವತ್ತು ಎಂದು ಕೆಲವರು ಹೇಳಿಕೊಳ್ಳುತ್ತಿದ್ದಾರೆ. ಅನೇಕ ಜನ ನಾವು ಅದರ ಸಂರಕ್ಷಕರು ಎಂದು ಹೇಳಿಕೊಂಡು ತಿರುಗುತ್ತಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಜಿಲ್ಲೆಯ ಕೊರಟಗೆರೆ ತಾಲೂಕಿನ ಸಿದ್ದರಬೆಟ್ಟದಲ್ಲಿ ನಡೆದ ಜನಜಾಗೃತಿ ಧರ್ಮ ಸಮಾರಂಭದಲ್ಲಿ ಮಾತನಾಡಿದ ಅವರು, ಆದರೆ ಭಾರತದಲ್ಲಿನ ಧಾರ್ಮಿಕ ಐಶ್ವರ್ಯ ಧಾರೆ ಎಲ್ಲರಿಗೂ ಸೇರಿರುವಂತಹದು ಎಂದು ಹೇಳಿದರು.
ಸ್ವಾತಂತ್ರ್ಯ ಬಂದ ನಂತರ ಸಂವಿಧಾನದಲ್ಲಿ ಅವರವರ ಧರ್ಮವನ್ನು ಪಾಲಿಸಿಕೊಂಡು ಹೋಗಬಹುದು ಅವಕಾಶವನ್ನು ಕಲ್ಪಿಸಿ ಕೊಡಲಾಗಿದೆ. ಹಾಗಾಗಿ ಧರ್ಮ ಎಂಬುದು ಎಲ್ಲರಿಗೂ ಸೇರಬೇಕು ಎಂಬಂತಹ ವಿಚಾರಧಾರೆಯ ಮೇಲೆ ನಂಬಿಕೆಯನ್ನು ಇಟ್ಟಿದ್ದೇನೆ ಎಂದು ಹೇಳಿದರು.
ಇಂತಹ ವಿಚಾರಧಾರೆಯ ದೃಷ್ಟಿಯಲ್ಲಿ ಬಾಳೆಹೊನ್ನೂರಿನ ಶ್ರೀ ರಂಭಾಪುರಿ ಮಠದ ಸ್ವಾಮೀಜಿಗಳು ಸಾಗುತ್ತಿದ್ದಾರೆ. ಧಾರ್ಮಿಕ ಮೌಲ್ಯಗಳನ್ನು ಸಾವಿರಾರು ಜನರಿಗೆ ತಲುಪಿಸಲು ತಮ್ಮ ಬದುಕನ್ನೇ ಮುಡಿಪಾಗಿಟ್ಟಿದ್ದಾರೆ. ಅದೇ ರೀತಿ ಅವರ ಶಿಷ್ಯರು ಒಂದಕ್ಕೂ ಕೂಡ ಇದೇ ರೀತಿಯಲ್ಲಿ ಸಾಗುವಂತೆ ಸೂಚನೆಯನ್ನು ಕೊಟ್ಟಿದ್ದಾರೆ ಎಂದು ಹೇಳಿದರು.
ಪ್ರಸ್ತುತ ಕಾಲಘಟ್ಟದಲ್ಲಿ ಲಕ್ಷಾಂತರ ಮಕ್ಕಳಿಗೆ ತ್ರಿವಿಧ ದಾಸೋಹದ ಮೂಲಕ ಸಾರ್ಥಕತೆಯನ್ನು ಗಳಿಸಿಕೊಂಡು ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ ಆದರೆ ಅವರು ನಮ್ಮನ್ನು ಬಿಟ್ಟು ಹೋಗಿಲ್ಲ ಎಂಬ ಭಾವನೆ ನನ್ನಲ್ಲಿದೆ ಎಂದು ಹೇಳಿದರು.
ಅದೇ ನಿಟ್ಟಿನಲ್ಲಿ ಅನೇಕ ಧಾರ್ಮಿಕ ಕ್ಷೇತ್ರಗಳು ಹಾಗೂ ಮಠಗಳು ಧಾರ್ಮಿಕ ಸೇವೆಗಳನ್ನು ಮಾಡುತ್ತಾ ಬಂದಿದೆ. ಈ ಮೂಲಕ ಆಧುನಿಕ ಜಗತ್ತಿಗೆ ಮಹತ್ವಪೂರ್ಣ ಬದಲಾವಣೆ ಆಗುತ್ತಿದೆ ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


