ಬಿಬಿಎಂಪಿ ಪಶುಪಾಲನೆ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕ ಮಾಯಣ್ಣ ಅವರನ್ನು ಮತ್ತೆ ಅಮಾನತು ಮಾಡಲಾಗಿದೆ. ಈ ಹಿಂದೆ ಅಮಾನತು ಮಾಡಿದ್ದನ್ನು ತೆರವುಗೊಳಿಸಿ ಕೆಲಸಕ್ಕೆ ನಿಯೋಜಿಸಿದ್ದರೂ ಕಚೇರಿಗೆ ಹಾಜರಾಗದ್ದರಿಂದ ಗಂಭೀರ ಕರ್ತವ್ಯಲೋಪ ಎಸಗಿರುವುದರಿಂದ ಬಿಬಿಎಂಪಿ ಮುಖ್ಯ ಆಯುಕ್ತರ ಸೂಚನೆ ಮೇರೆಗೆ ಆಡಳಿತದ ಉಪ ಆಯುಕ್ತರು ಸೋಮವಾರ ಅಮಾನತಿನ ಆದೇಶ ಹೊರಡಿಸಿದ್ದಾರೆ.
ರಸ್ತೆ ಮೂಲ ಸೌಕರ್ಯ ಮುಖ್ಯ ಎಂಜಿನಿಯರ್ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಮಾಯಣ್ಣ ಅವರನ್ನು ಭ್ರಷ್ಟಾಚಾರ ನಿಗ್ರಹದಳ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಳಿಸಲಾಗಿತ್ತು. ನಂತರ ಅಮಾನತು ತೆರೆವುಗೊಳಿಸಿ, 2022 ಜುಲೈ 19ರಂದು ಪಶುಪಾಲನೆ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ಹುದ್ದೆಗೆ ನಿಯೋಜಿಸಲಾಗಿತ್ತು. ಅಂದಿನಿಂದ ಇಲ್ಲಿಯವರೆಗೆ ಕರ್ತವ್ಯಕ್ಕೆ ಹಾಜರಾಗಿಲ್ಲ. ಹೀಗಾಗಿ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


