ವಿಧಾನಸಭೆಯಿಂದ ವಿಧಾನಪರಿಷತ್ ನ ಮೂರು ಸ್ಥಾನಗಳಿಗೆ ಉಪಚುನಾವಣೆ ನಡೆಸುವ ಸಂಬಂಧ ಇಂದು ಅಧಿಸೂಚನೆ ಪ್ರಕಟವಾಗಲಿದ್ದು, ಇಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ವಿಧಾನಪರಿಷತ್ ನ ಮೂರು ಸ್ಥಾನಗಳಿಗೆ ಉಪಚುನಾವಣೆಗೆ ಜೂನ್ 20 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಜೂನ್ 21 ರಂದು ನಾಮಪತ್ರ ಪರಿಶೀಲನೆ ನಡೆಸಲಿದೆ.
23 ರಂದು ಉಮೇದುದಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದೆ. ಜೂನ್ 30 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿಧಾನಪರಿಷತ್ತಿನ ಮೂರು ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಅದೇ ದಿನ ಮತ ಎಣಿಕೆ ನಡೆದು, ಸಂಜೆ 5 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ. ಒಂದೇ ದಿನ ಮೂರು ಸ್ಥಾನಗಳಿಗೆ ಪ್ರತ್ಯೇಕ ಚುನಾವಣೆ ನಡೆಯಲಿದೆ. ವಿಧಾನಪರಿಷತ್ ಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯಿಂದ ಆಯ್ಕೆಯಾಗಿದ್ದ ಲಕ್ಷ್ಮಣ್ ಸವದಿ, ಆರ್.ಶಂಕರ್ ಹಾಗೂ ಬಾಬುರಾವ್ ಚಿಂಚನಸೂರು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಂಬಂಧ ಪಕ್ಷ ತೊರೆದು ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಈ ಮೂರು ಸ್ಥಾನಗಳಿಗೆ ಉಪಚುನಾವಣೆ ಘೋಷಣೆಯಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


