ಬೆಳ್ಳಂದೂರು: ದಶಕಗಳಿಂದ ಬೆಳ್ಳಂದೂರು ಕಾಲುವೆಯ ಹೂಳು ತೆಗೆಯದ ಕಾರಣ ಈಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುತ್ತಿತ್ತು ಎಂದು ಮಹದೇವಪುರ ಶಾಸಕಿ ಮಂಜುಳಾ ಲಿಂಬಾವಳಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗ ಬಿಬಿಎಂಪಿ ಎಸ್ ಡಬ್ಲೂಡಿ ಇಲಾಖೆಯಿಂದ ಹೂಳು ತೆಗೆಯುವ ಕಾರ್ಯವನ್ನು ನಡೆಸಲಾಗುತ್ತಿದ್ದು, ಇದರಿಂದ ಕೆರೆಗಳಿಗೆ ಸಂಪರ್ಕ ಕಲ್ಪಿಸುವ ಪ್ರಾಥಮಿಕ ರಾಜಕಾಲುವೆಗಳು ಯಾವುದೇ ಅಡೆತಡೆಗಳಿಲ್ಲದೆ ಪೂರ್ಣ ಪ್ರಮಾಣದ ಮಳೆ ನೀರನ್ನು ಸಾಗಿಸಲು ಸಾಧ್ಯವಾಗುತ್ತದೆ ಎಂದರು. ಇದರಿಂದಾಗಿ ನಾಳೆ ಮಳೆ ನೀರಿನಿಂದ ಉಂಟಾಗುವ ತೊಂದರೆ ಕಡಿಮೆಯಾಗಲಿದೆ ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


