ತುಮಕೂರು: ವಿದ್ಯುತ್ ಸ್ಪರ್ಶದಿಂದ ಗಂಭೀರವಾಗಿ ಗಾಯಗೊಂಡ ನಾಲ್ವರು ಆಸ್ಪತ್ರೆಗೆ ದಾಖಲಾಗಿದ್ದು, ಅಲ್ಲದೆ ನೂರಾರು ಮನೆಗಳ ವಿದ್ಯುತ್ ಉಪಕರಣಗಳು ಸುಟ್ಟು ಬಸ್ಮವಾಗಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಚಿಲುಗನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿನ 11 ಕೆವಿ ವಿದ್ಯುತ್ ಸಾಮರ್ಥ್ಯದ ತಂತಿ ತುಂಡಾದ ಪರಿಣಾಮ ಅವಘಡ ಸಂಭವಿಸಿದೆ. ಗ್ರಾಮದ 70 ಮನೆಗಳಲ್ಲಿನ ವಿದ್ಯುತ್ ಉಪಕರಣಗಳು ಭಸ್ಮವಾಗಿದ್ದು ನೂರಾರು ಮನೆಗಳ ವೈರಿಂಗ್ ಸೇರಿದಂತೆ ಗೃಹಪಯೋಗಿ ವಸ್ತುಗಳು, ವಿದ್ಯುತ್ ಮೀಟರ್ ಗಳು ಸುಟ್ಟು ಭಸ್ಮವಾಗಿವೆ.ಲಕ್ಷಾಂತರ ರೂ. ಬೆಲೆಯ ಬಾಳುವ ಗೃಹಪಯೋಗಿ ವಸ್ತುಗಳು ಸುಟ್ಟು ಕರಕಲಾಗಿವೆ. ಈ ನಡುವೆ ಒಂದೇ ಕುಟುಂಬದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ತಾಯಿ ಶಾರದಮ್ಮ (55) , ಮಗ ಮಂಜುನಾಥ್ (35), ಸೊಸೆ ವರಲಕ್ಷ್ಮಿ (30), ಮೊಮ್ಮಗ ದರ್ಶನ್ (12 )ವಿದ್ಯುತ್ ಶಾಕ್ ಗೆ ತುತ್ತಾಗಿದ್ದರೆ. ಪ್ರಾಣಾಪಾಯದಿಂದ ಪಾರಾಗಿರೋ ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅವಘಡ ಸಂಭವಿಸಿದ್ದ ಸ್ಥಳಕ್ಕೆ ಮಧುಗಿರಿ ಡಿವೈಎಸ್ಪಿ, ಕೊರಟಗೆರೆ ತಹಶೀಲ್ದಾರ್, ಬೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯುತ್ ತಂತಿ ದುರಸ್ತಿಗೆ ಕ್ರಮ ಕೈಗೊಂಡಿದ್ದಾರೆ.
ಸುಟ್ಟು ಕರಕಲಾದ ಗೃಹಪಯೋಗಿ ವಸ್ತುಗಳಿಗೆ ಶೀಘ್ರ ಪರಿಹಾರವನ್ನೂ ಕೊಡುವುದಾಗಿ ಬೆಸ್ಕಾಂ ಅಧಿಕಾರಿಗಳ ಭರವಸೆ ನೀಡಿದ್ದಾರೆ.
ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ ನಾಲ್ವರ ಆರೋಗ್ಯ ವಿಚಾರಿಸಿದ ತಹಶೀಲ್ದಾರ್ ಮುನಿಶಾಮಿ ರೆಡ್ಡಿ ಸೂಕ್ತ ಹಾಗೂ ಹೆಚ್ಚಿನ ಚಿಕಿತ್ಸೆಗೆ ಭರವಸೆಯ ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


