ತುಮಕೂರು: ವಿದ್ಯಾರ್ಥಿನಿಯೊಂದಿಗೆ ಉಪನ್ಯಾಸಕನ ಲವ್ವಿಡವ್ವಿಯನ್ನು ವಿರೋಧಿಸಿ ರೊಚ್ಚಿಗೆದ್ದ ವಿದ್ಯಾರ್ಥಿಗಳು ಉಪನ್ಯಾಸಕನ ವಿರುದ್ಧ ಪ್ರತಿಭಟನೆ ನಡೆಸಿದ ಘಟನೆ ತುಮಕೂರು ಜಿಲ್ಲೆ ತಿಪಟೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದೆ.
ವಾಣಿಜ್ಯ ವಿಭಾಗದ ಉಪನ್ಯಾಸಕ ರಂಗನಾಥ್ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ವಿದ್ಯಾರ್ಥಿನಿಯೊಂದಿಗೆ ಮೊಬೈಲ್ ಚಾಟಿಂಗ್ ಹಾಗೂ ಕಾರಿನಲ್ಲಿ ಸುತ್ತಾಟ ನಡೆಸುತ್ತಿರುವ ಬಗ್ಗೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಉಪನ್ಯಾಸಕನನ್ನು ಕೊಠಡಿಯಲ್ಲಿ ಕೂಡಿಹಾಕಿದ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಿಪಟೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಿಪಟೂರು ಪೊಲೀಸರು ಕಾಲೇಜಿಗೆ ದೌಡಾಯಿಸಿದ್ದು, ವಿದ್ಯಾರ್ಥಿಗಳ ಮನವೊಲಿಕೆ ಮಾಡುತ್ತಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


