ತುಮಕೂರು: ಫೇಸ್ ಬುಕ್ ನಲ್ಲಿ ಪರಿಚಯ ಮಾಡಿಕೊಂಡ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ 10 ವರ್ಷಗಳ ಕಾಲ ಶಿಕ್ಷೆ ಹಾಗೂ 25 ಸಾವಿರ ರೂಪಾಯಿ ದಂಡ ವಿಧಿಸಿ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್ ಟಿಎಸ್ ಸಿ (ಪೋಕ್ಸೋ) ನ್ಯಾಯಾಲಯವು ತೀರ್ಪು ನೀಡಿದೆ.
ಫೇಸ್ ಬುಕ್ ನಲ್ಲಿ ಬಾಲಕಿಯನ್ನು ಪರಿಚಯ ಮಾಡಿಕೊಂಡ ಅಪರಾಧಿ ರವಿಯು, ಆಕೆಯನ್ನು ಪುಸಲಾಯಿಸಿ ಮೈಸೂರಿನ ಹೆಚ್.ಡಿ.ಕೋಟೆ ಟೌನ್ ನ ವಿಶ್ವನಾಥ ಕಾಲೋನಿಯಲ್ಲಿ ಬಾಡಿಗೆಗೆ ಮನೆ ಪಡೆದುಕೊಂಡು, ಆ ಮನೆಯಲ್ಲಿ ಇರಿಸಿ ಬಾಲಕಿಯ ಇಚ್ಛೆಯ ವಿರುದ್ಧವಾಗಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನೆಂದು ಶಿರಾ ಪೊಲೀಸ್ ತನಿಖಾಧಿಕಾರಿಗಳಾದ ಹನುಮಂತರಾಯಪ್ಪ ಜೆ.ಬಿ. ಈ ಪ್ರಕರಣದ ತನಿಖೆ ನಡೆಸಿದ್ದು, ನ್ಯಾಯಾಲಯಕ್ಕೆ ಪೊಲೀಸರು ದೋಷಾರೋಪಣಾ ಪಟ್ಟಿ ಸಲ್ಲಿಸಿದರು.
ಈ ಪ್ರಕರಣದ ವಿಚಾರಣೆ ನಡೆಸಿದ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್ ಟಿಎಸ್ ಸಿ (ಪೋಕ್ಸೋ) ನ್ಯಾಯಾಲಯವು, ರವಿ ಕೃತ್ಯ ನಡೆಸಿರುವುದು ಸಾಬೀತಾದ ಕಾರಣ ಆತನಿಗೆ 10 ವರ್ಷಗಳ ಕಾಲ ಶಿಕ್ಷೆ ಹಾಗೂ 25 ಸಾವಿರ ರೂಪಾಯಿಗಳ ದಂಡ ವಿಧಿಸಿದ್ದು, ನೊಂದ ಬಾಲಕಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ 4 ಲಕ್ಷ ರೂ.ಗಳ ಪರಿಹಾರವನ್ನು ನೀಡಬೇಕು ಎಂದು ತೀರ್ಪು ನೀಡಿದೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಆಶಾ ಕೆ.ಎಸ್. ಅವರು ವಾದ ಮಂಡಿಸಿದರು.
ವರದಿ: ಶಿವಕುಮಾರ್, ಮೇಷ್ಟ್ರು ಮನೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA