ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಟ್ವಿಟರ್ ನಲ್ಲಿ 25 ಮಿಲಿಯನ್ ಹಿಂಬಾಲಕರನ್ನು ಹೊಂದಿರುವ ಮೊದಲ ಮುಖ್ಯಮಂತ್ರಿಯಾಗಿದ್ದಾರೆ. ಹಿಂಬಾಲಕರ ಸಂಖ್ಯೆ ಎಷ್ಟು ಎಂಬ ಮಾಹಿತಿಯನ್ನು ಸ್ವತಃ ಮುಖ್ಯಮಂತ್ರಿ ಕಚೇರಿಯೇ ಟ್ವಿಟರ್ ಮೂಲಕ ಬಿಡುಗಡೆ ಮಾಡಿದೆ.
ಮುಖ್ಯಮಂತ್ರಿಯ ಜನಪ್ರಿಯತೆ ಮಿತಿ ಮೀರಿದ್ದು, ಇವತ್ತಿನವರೆಗೂ ದೇಶದ ಯಾವುದೇ ಪ್ರಮುಖ ನಾಯಕರಿಗೆ ಇಷ್ಟೊಂದು ಫಾಲೋವರ್ಸ್ ಇಲ್ಲ ಎಂದು ಟ್ವೀಟ್ ನಲ್ಲಿ ಹೇಳಲಾಗಿದೆ. ಇದರೊಂದಿಗೆ ಯೋಗಿ ಆದಿತ್ಯನಾಥ್ ಟ್ವಿಟರ್ ನಲ್ಲಿ 25 ಮಿಲಿಯನ್ ಸಾಧನೆ ಮಾಡುವ ಮೂಲಕ ಈ ದಾಖಲೆ ಸೃಷ್ಟಿಸಿದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಎಂಟು ವರ್ಷಗಳ ಹಿಂದೆ ಸೆಪ್ಟೆಂಬರ್ 2015 ರಲ್ಲಿ, ಮುಖ್ಯಮಂತ್ರಿ ಯೋಗಿ ಟ್ವಿಟರ್‌ನಲ್ಲಿ ತಮ್ಮ ಅಧಿಕೃತ ಹ್ಯಾಂಡಲ್ ಅನ್ನು ಪ್ರಾರಂಭಿಸಿದರು.
2017 ರಲ್ಲಿ ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ಏತನ್ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟರ್‌ನಲ್ಲಿ 89 ಮಿಲಿಯನ್ ಹಿಂಬಾಲಕರನ್ನು ಹೊಂದಿದ್ದಾರೆ. ಗೃಹ ಸಚಿವ ಅಮಿತ್ ಶಾ ಟ್ವಿಟರ್‌ನಲ್ಲಿ 33 ಮಿಲಿಯನ್ ಹಿಂಬಾಲಕರನ್ನು ಹೊಂದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


