ತುರುವೇಕೆರೆ: ಗೋಣಿ ತುಮಕೂರು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ನಾಗರತ್ನ ರಂಗಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ .
ಈ ಹಿಂದಿನ ಅಧ್ಯಕ್ಷರಾದ ಜಯಲಕ್ಷ್ಮಮ್ಮನವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು. 14 ಜನ ಸದಸ್ಯ ಬಲದ ಗ್ರಾಮ ಪಂಚಾಯಿತಿಯಲ್ಲಿ ನಾಗರತ್ನ ರಂಗಸ್ವಾಮಿಯವರು ಒಬ್ಬರೇ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದು, ನಾಮಪತ್ರ ಸಲ್ಲಿಕೆಯ ಕೊನೆಯವರೆಗೂ ಯಾರೊಬ್ಬರೂ ಸಹ ನಾಮಪತ್ರ ಸಲ್ಲಿಸದ ಕಾರಣ , ಚುನಾವಣಾ ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದ ತಾಲ್ಲೂಕಿನ ತಹಶೀಲ್ದಾರ್ ವೈ.ಎಂ.ರೇಣು ಕುಮಾರ್ ರವರು ನಾಗರತ್ನ ರಂಗಸ್ವಾಮಿ ರವರನ್ನು ಅವಿರೋಧ ಆಯ್ಕೆ ಎಂದು ಘೋಷಣೆ ಮಾಡಿದರು.
ಘೋಷಣೆ ಮಾಡಿ ನೂತನ ಅಧ್ಯಕ್ಷರಿಗೆ ಅಭಿನಂದಿಸಿದರು ಅಧ್ಯಕ್ಷರ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಸಂಭ್ರಮ ಹಂಚಿಕೊಂಡರು.
ಈ ಸಂದರ್ಭದಲ್ಲಿ ನಿಕಟ ಪೂರ್ವ ಅಧ್ಯಕ್ಷ ಜಯಲಕ್ಷ್ಮಮ್ಮ ಉಪಾಧ್ಯಕ್ಷ ಲಕ್ಷ್ಮಮ್ಮ ಹಾಗೂ ಗುತ್ತಿಗೆದಾರ ತ್ಯಾಗರಾಜು ಸೇರಿದಂತೆ ಸದಸ್ಯರುಗಳು ಉಪಸ್ಥಿತರಿದ್ದರು.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA