ರಾಜ್ಯ ಸರ್ಕಾರ ಮೂರು ನಿಗಮಗಳಿಗೆ ಸಚಿವ ಹೆಚ್ ಕೆ ಪಾಟೀಲ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಆದೇಶಿಸಿದೆ. ಈ ಸಂಬಂಧ ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆಯನ್ನು ಹೊರಡಿಸಿದ್ದಾರೆ.
ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದಂತ ಹೆಚ್ ಕೆ ಪಾಟೀಲ್ ಅವರನ್ನು ಪ್ರವಾಸೋದ್ಯಮ ಇಲಾಖೆ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವಂತ ನಿಗಮ, ಸಂಸ್ಥೆ, ಪ್ರಾಧಿಕಾರಗಳ ಮೂರಕ್ಕೆ ಅಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಿದ್ದಾರೆ.
ಸಚಿವ ಹೆಚ್ ಕೆ ಪಾಟೀಲ್ ಅವರನ್ನು ಬೆಂಗಳೂರಿನ ಅರಣ್ಯ, ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಹಾಗೂ ಮೈಸೂರಿನ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಮುಂದಿನ ಆದೇಶದವರೆಗೆ ನೇಮಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


