ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಬಡವರಿಗೆ ವಿತರಿಸಲು ಅಗತ್ಯವಾಗಿರುವ ಅಕ್ಕಿಯನ್ನು ನಾವು ಕೇಂದ್ರ ಸರಕಾರದಿಂದ ಖರೀದಿಸಲು ಕೇಳಿದ್ದೇವೆ ವಿನಹಃ ಪುಕ್ಕಟೆಯಾಗಿಯೇನೂ ಕೇಳಿರಲಿಲ್ಲ. ಆದರೆ ಅವರು ಇದರಲ್ಲೂ ರಾಜಕೀಯ ಮಾಡುತ್ತಿದ್ದಾರೆ. ಈ ಮೂಲಕ ಬಿಜೆಪಿ ತನ್ನ ಬಡಜನ ವಿರೋಧಿ ಧೋರಣೆಯನ್ನು ಪ್ರದರ್ಶಿಸುತ್ತಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.
ಭಾನುವಾರ ಇಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅನ್ನಭಾಗ್ಯ ಯೋಜನೆಯ ಅಗತ್ಯದ ಬಗ್ಗೆ ನಾವು ಈಗಾಗಲೇ ಕೇಂದ್ರ ಸರಕಾರಕ್ಕೆ ಸಾಕಷ್ಟು ಹೇಳಿದ್ದೇವೆ. ಇನ್ನು ನಮ್ಮ ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದರು ದನಿ ಎತ್ತಬೇಕು. ದೇವರು ಇನ್ನಾದರೂ ಅವರಿಗೆ ಸದ್ಭುದ್ಧಿಯನ್ನು ಕೊಡಲಿ ಅಷ್ಟೆ, ” ಎಂದರು.
ಕಾಂಗ್ರೆಸ್ ಸರಕಾರವು ಚುನಾವಣೆಯ ಹೊತ್ತಿನಲ್ಲೇ ಅನ್ನಭಾಗ್ಯ ಸೇರಿದಂತೆ ಐದು ಗ್ಯಾರಂಟಿಗಳನ್ನು ಘೋಷಿಸಿತ್ತು. ಈಗ ಇವುಗಳನ್ನು ಒಂದೊಂದಾಗಿ ಜಾರಿಗೆ ತರಲಾಗುತ್ತಿದೆ. ಬಡವರ ಹಸಿವನ್ನು ನೀಗಿಸುವಂತಹ ಅನ್ನಭಾಗ್ಯ ಯೋಜನೆಗೆ ಮೊದಲು ಅಕ್ಕಿ ಕೊಡುವುದಾಗಿ ಹೇಳಿದ ಕೇಂದ್ರದ ಬಿಜೆಪಿ ಸರಕಾರವು ಈಗ ಅದರಿಂದ ಹಿಂದೆ ಸರಿದಿರುವುದು ಅವರ ಸಣ್ಣತನವನ್ನು ತೋರಿಸುತ್ತದೆ ಅಷ್ಟೆ, ” ಎಂದು ಅವರು ಟೀಕಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


