ಶಿವಮೊಗ್ಗದ ವಿಜಯನಗರದಲ್ಲಿ ಮಹಿಳೆಯೊಬ್ಬರನ್ನು ಉಸಿರುಗಟ್ಟಿಸಿ ಹತ್ಯೆ ಮಾಡಲಾಗಿದೆ. ಕಮಲಮ್ಮ (57) ಕೊಲೆಯಾದ ಮಹಿಳೆ, ಜೂನ್ 17 ರಂದು ರಾತ್ರಿ ಈ ಘಟನೆ ನಡೆದಿದೆ.
ಇಂಜಿನಿಯರ್ ಆಗಿರುವ ಕಮಲಮ್ಮ ಅವರ ಪತಿ ಮಲ್ಲಿಕಾರ್ಜುನ ಕೆಲಸದ ನಿಮಿತ್ತ ಗೋವಾಕ್ಕೆ ತೆರಳಿದ್ದರು. ರಾತ್ರಿ ಹೊತ್ತು ಕಮಲಮ್ಮ ಒಬ್ಬರೇ ಇದ್ದ ವೇಳೆ ಮನೆಗೆ ನುಗ್ಗಿದ ದುಷ್ಕರ್ಮಿಗಳು, ಬಾಯಿಗೆ ಬಟ್ಟೆ ತುರುಕಿಸಿ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ. ಬಳಿಕ ಮನೆಯಲ್ಲಿದ್ದ ಕೆಲ ವಸ್ತುಗಳನ್ನು ದೋಚಿದ್ದಾರೆ. ಈ ಕುರಿತು ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶನಿವಾರ ಸಂಜೆ ವೇಳೆಗೆ ಘಟನೆ ಸಂಭವಿಸಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ವಿಚಾರ ತಿಳಿದು ತುಂಗಾ ನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದರು. ದಾವಣಗೆರೆಯಿಂದ ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು, ಶಿವಮೊಗ್ಗದ ಶ್ವಾನ ದಳ ಸ್ಥಳಕ್ಕೆ ಭೇಟಿ ನೀಡಿದೆ. ಕೊಲೆಗೆ ಕಾರಣ ಇನ್ನಷ್ಟೆ ತಿಳಿದು ಬರಬೇಕಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


