ನಮ್ಮ ದೇಹದ ಜೀವ ಕೋಶಗಳಿಗೆ ಆಮ್ಲಜನಕ ಅತ್ಯಾವಶ್ಯಕವಾಗಿದೆ. ನಮ್ಮ ದೇಹಕ್ಕೆ ಆಮ್ಲಜನಕವನ್ನು ತಲುಪಿಸುವ ಪ್ರಮುಖ ಕೆಲಸವನ್ನು ಹಿಮೋಗ್ಲೋಬಿನ್ ಮಾಡುತ್ತದೆ. ಹೀಗಾಗಿ ನಮ್ಮ ರಕ್ತದಲ್ಲಿ ಹಿಮೋಗ್ಲೋಬಿನ್ ಕಡಿಮೆಯಾದರೆ, ನಮಗೆ ಹಲವು ರೋಗಗಳ ಅನುಭವಗಳಾಗುತ್ತವೆ.
ರಕ್ತದಲ್ಲಿ ಹಿಮೋಗ್ಲೋಬಿನ್ ನ ಮಟ್ಟ ಕಡಿಮೆಯಾದರೆ, ರಕ್ತ ಹೀನತೆ ಉಂಟಾಗುತ್ತದೆ. ಇದರಿಂದಾಗಿ ನಮ್ಮ ದೇಹದಲ್ಲಿ ದೌರ್ಬಲ್ಯ, ಆಯಾಸ, ಉಸಿರಾಟದ ಸಮಸ್ಯೆ, ಅನಿಮಿಯಮಿತ ಹೃದಯ ಬಡಿತ ಮೊದಲಾದ ಸಮಸ್ಯೆಗಳು ಹುಟ್ಟಿಕೊಳ್ಳುತ್ತದೆ. ನಾವು ಇಂತಹ ಸಮಸ್ಯೆಗಳನ್ನು ನಿರ್ಲಕ್ಷಿಸಿದರೆ, ಮುಂದೊಂದು ದಿನ ಅದಕ್ಕೆ ಬೆಲೆ ಕಟ್ಟಬೇಕಾದೀತು. ಆದರೆ, ಇವುಗಳಿಗೆಲ್ಲ ಔಷಧಿ ಸೇವಿಸುವುದೇ ಪರಿಹಾರವೇ?, ಖಂಡಿತವಾಗಿಯೂ ಅಲ್ಲ. ನಮ್ಮ ಆಹಾರದಲ್ಲಿ ಕೆಲವು ಬದಲಾವಣೆ ಮಾಡಿದರೆ, ಖಂಡಿತವಾಗಿಯೂ ಈ ಸಮಸ್ಯೆಗಳಿಂದ ನಾವು ಪಾರಾಗಬಹುದಾಗಿದೆ.
ನಮ್ಮ ದೇಹದಲ್ಲಿ ಹಿಮೋಗ್ಲೋಬಿನ್ ನ ಅಂಶ ಹೆಚ್ಚಿಸಲು ಕೊತ್ತಂಬರಿ ಸೊಪ್ಪುಗಳನ್ನು ಹೆಚ್ಚಾಗಿ ಬಳಸಬೇಕು. ರಾತ್ರಿ ವೇಳೆ ಹತ್ತು ಖರ್ಜೂರ ಮತ್ತು ಐದು ಒಣದ್ರಾಕ್ಷಿಗಳನ್ನು ನೀರಿನಲ್ಲಿ ನೆನೆಸಿ, ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಬೇಕು. ಇದರ ಜೊತೆಗೆ ಬಿಟ್ರೋಟ್, ಕ್ಯಾರೆಟ್ ಮತ್ತು ನೆಲ್ಲಿಕಾಯಿ ಜ್ಯೂಸ್ ಕುಡಿಯುವುದು ಉತ್ತಮ. ಇದು ನಮ್ಮ ದೇಹದಲ್ಲಿ ಹಿಮೋಗ್ಲೋಬಿನ್ ನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.