ಕೇಂದ್ರ ಸರ್ಕಾರ ಈಗಾಗಲೇ ಐದು ಕೆ.ಜಿ.ಯನ್ನು ಉಚಿತವಾಗಿ ನೀಡುತ್ತಿದೆ. ಇನ್ನೂ ಐದು ಕೆ.ಜಿ. ಅಕ್ಕಿಗೆ ನಾವು ಹಣ ಕೊಡುತ್ತೇವೆ, ಕೊಡಿ ಎಂದು ಕೇಳುತ್ತಿದ್ದೇವೆ. ಆದರೆ ಅದಕ್ಕೆ ಸಮರ್ಪಕವಾದ ಉತ್ತರ ದೊರೆಯುತ್ತಿಲ್ಲ ಎಂದು ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಾವು ಇನ್ನುಳಿದ ಐದು ಕೆ.ಜಿ. ಅಕ್ಕಿಯನ್ನು ಉಚಿತವಾಗಿ ಕೊಡಿ ಎಂದು ಕೇಳುತ್ತಿಲ್ಲ, ಆಹಾರ ನಿಗಮದವರು ಏಳು ಲಕ್ಷ ಟನ್ ನಮ್ಮ ಬಳಿ ಅಕ್ಕಿ ಇದೆ ಎಂದು ಪತ್ರ ಬರೆದಿದ್ದರು. ಹೀಗಾಗಿ ನಾವು ಅದನ್ನು ಕೊಡುವಂತೆ ಕೇಳಿದ್ದೇವೆ, ಆದರೆ ಪುನಃ ಆ ಪತ್ರಕ್ಕೆ ಉತ್ತರ ನೀಡದೆ ಅಕ್ಕಿ ಉಳಿದಿಲ್ಲ ಎಂದು ಹೇಳುತ್ತಿದ್ದಾರೆ ಎಂದು ಹೇಳಿದರು.
ರಾಜ್ಯದಲ್ಲಿ ಮುಂಗಾರು ನಿರೀಕ್ಷಿತ ಸಮಯಕ್ಕೆ ಆರಂಭವಾಗದ ಹಿನ್ನೆಲೆಯಲ್ಲಿ ಹಾಗೂ ಹೇಮಾವತಿ ನಾಲೆಗಳಲ್ಲಿ ಕಳೆದ ಬಾರಿ ಅಪಾರ ಪ್ರಮಾಣದಲ್ಲಿ ಮಳೆಯ ಆದ ಹಿನ್ನೆಲೆಯಲ್ಲಿ ಸಾಕಷ್ಟು ಹಾನಿ ಉಂಟಾಗಿದೆ. ಅದರ ದುರಸ್ತಿ ಕಾರ್ಯ ಕೂಡ ನಡೆಯುತ್ತಿದೆ. ಈ ಕಾರಣಗಳಿಂದಾಗಿ ಹೇಮಾವತಿ ನದಿ ನೀರನ್ನು ಹೇಮಾವತಿ ಜಲಾಶಯದಿಂದ ತುಮಕೂರು ಜಿಲ್ಲೆಗೆ ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಇದೇ ವೇಳೆ ಸಚಿವರು ಹೇಳಿದರು.
ತುಮಕೂರು ನಗರಕ್ಕೆ ಮುಂದಿನ 10 ದಿನಗಳವರೆಗೆ ಬಳಕೆ ಮಾಡಲು ಮಾತ್ರ ನಮ್ಮಲ್ಲಿ ಹೇಮಾವತಿ ನೀರು ಲಭ್ಯವಿದೆ. ಡೆಡ್ ಸ್ಟೋರೇಜ್ ಗೆ ಬಂದು ತಲುಪಿದ್ದೇವೆ. ಹೀಗಾಗಿ ಈ ತಿಂಗಳ 25ನೇ ತಾರೀಖಿನ ಒಳಗೆ ಹೇಮಾವತಿ ನದಿ ನೀರನ್ನು ಜಿಲ್ಲೆಗೆ ತರುವಂತಹ ಕೆಲಸಕ್ಕೆ ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


