nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಳ್ಳಾರಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾ

    July 3, 2026

    ಕೊರಟಗೆರೆ: 8,589 ಪಿಂಚಣಿದಾರರಿಗೆ ಪಿಂಚಣಿ ತಾತ್ಕಾಲಿಕ ಸ್ಥಗಿತ: ದಾಖಲೆ ಸಲ್ಲಿಸಿ– ತಹಶೀಲ್ದಾರ್ ಮಂಜುನಾಥ್ ಕೆ.

    July 3, 2026

    ತುಮಕೂರು: ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿ ಸಲ್ಲಿಸಬಹುದು?

    July 2, 2026
    Facebook Twitter Instagram
    ಟ್ರೆಂಡಿಂಗ್
    • ಬಳ್ಳಾರಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾ
    • ಕೊರಟಗೆರೆ: 8,589 ಪಿಂಚಣಿದಾರರಿಗೆ ಪಿಂಚಣಿ ತಾತ್ಕಾಲಿಕ ಸ್ಥಗಿತ: ದಾಖಲೆ ಸಲ್ಲಿಸಿ– ತಹಶೀಲ್ದಾರ್ ಮಂಜುನಾಥ್ ಕೆ.
    • ತುಮಕೂರು: ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿ ಸಲ್ಲಿಸಬಹುದು?
    • ತಲೆಗೆ ಬಿದ್ದ ಏಟು: ಜು.5ರಂದು ಕೃತಿ ಬಿಡುಗಡೆ
    • ನಾಯಿಯನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಚಿರತೆ; ಅರಣ್ಯ ಇಲಾಖೆ ಬೋನಿಗೆ ಸೆರೆ
    • ತುಮಕೂರಿನ ಹಿರಿಯ ಪತ್ರಕರ್ತ ಎಂ.ಈಶ್ವರ್ ಅನಾರೋಗ್ಯದಿಂದ ನಿಧನ
    • ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಕೃಷಿ ಇಲಾಖೆ ಮನವಿ
    • ನನೆಗುದಿಗೆ ಬಿದ್ದಿದ್ದ ರೈಲ್ವೆ ಕಾಮಗಾರಿ ಪ್ರಾರಂಭ: ಆಂಧ್ರಪ್ರದೇಶದ ರಾಯದುರ್ಗದಿಂದ ಕರ್ನಾಟಕದ ಪಾವಗಡವರೆಗೆ ಕಾಮಗಾರಿ ಪೂರ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಕ್ಕಿಯ ವಿಚಾರದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುವುದು ಬೇಡ.
    ರಾಜ್ಯ ಸುದ್ದಿ June 20, 2023

    ಅಕ್ಕಿಯ ವಿಚಾರದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುವುದು ಬೇಡ.

    By adminJune 20, 2023No Comments2 Mins Read
    c t ravi

    ಅಕ್ಕಿಯ ವಿಚಾರದಲ್ಲಿ ಕಾಂಗ್ರೆಸ್ ಪಾರ್ಟಿಯು ಕೆಟ್ಟ ರಾಜಕಾರಣ ಮಾಡುವುದು ಬೇಡ ಎಂದು ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಅವರು ಆಗ್ರಹಿಸಿದ್ದಾರೆ. ಅಕ್ಕಿ ಕೊಡುವ ವಿಚಾರದಲ್ಲಿ ಕಾಂಗ್ರೆಸ್ ಪಾರ್ಟಿಯು ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು, ಬಿಜೆಪಿಯನ್ನು, ಪ್ರಧಾನಿ ನರೇಂದ್ರ ಮೋದಿಯವರನ್ನು ಎಳೆದು ತರಲು ಹರ ಸಾಹಸ ಮಾಡುತ್ತಿದೆ ಎಂದು ಟೀಕಿಸಿದ್ದಾರೆ.

    ಒಂದು ರಾಜ್ಯದ ಮುಖ್ಯಮಂತ್ರಿ ಎರಡು ಲಕ್ಷ ಟನ್ ಅಕ್ಕಿ ಬೇಡಿಕೆಗೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿಗಳಿಗಾಗಲಿ, ಕೇಂದ್ರ ಆಹಾರ ನಾಗರೀಕ ಸರಬರಾಜು ಸಚಿವರಾಗಲಿ ಬೇಡಿಕೆ ಇಡಲೇ ಇಲ್ಲ. ಅವರೊಂದಿಗೆ ಮಾತನಾಡುವ ಸೌಜನ್ಯವನ್ನೂ ತೋರಿಸಲಿಲ್ಲ. ರಾಜ್ಯ ಸರ್ಕಾರ 2 ಲಕ್ಷ ಟನ್ ಅಕ್ಕಿಗಾಗಿ ಎಫ್‌ಸಿಐ ವಿಭಾಗೀಯ ವ್ಯವಸ್ಥಾಪಕರಿಗೆ 9/6/23 ರಂದು ಪತ್ರ ಮುಖೇನ ವಿನಂತಿ ಮಾಡುತ್ತಾರೆ. 12/6/23ರಂದು ವಿಭಾಗೀಯ ವ್ಯವಸ್ಥಾಪಕ ಇದಕ್ಕೆ ಅನುಮತಿ ನೀಡುತ್ತಾರೆ. ಆದರೆ ಈ ಅನುಮತಿ ನೀಡುವ ಮುನ್ನ ಅವರು ಕೇಂದ್ರ ಕಚೇರಿಯನ್ನು ಸಂಪರ್ಕಿಸದೆ ಪ್ರಾಯಶ: ಏಕಮುಖವಾಗಿ ತೀರ್ಮಾನ ಕೈಗೊಂಡ ಹಾಗೆ ಭಾಸವಾಗುತ್ತದೆ ಎಂದು ತಿಳಿಸಿದ್ದಾರೆ.

    13/6/23 ರಂದು ಆಹಾರ ಮತ್ತು ನಾಗರಿಕ ಸರಬರಾಜು ಕಚೇರಿಯಿಂದ ಎಫ್‌ಸಿಐ ಕೇಂದ್ರ ಕಚೇರಿಗೆ ಒಎಂಎಸ್ಎಸ್ ಕೋಟಾದಡಿ ಅಕ್ಕಿ ಮಾರಾಟವನ್ನು ನಿಬರ್‌ಂಧಿಸಿರುವ ಬಗ್ಗೆ ಆದೇಶ ಬರುತ್ತದೆ. ಈ ತೀರ್ಮಾನವನ್ನು 08/06/23 ರಂದು ನಡೆದ ಸಭೆಯಲ್ಲಿ ತೀರ್ಮಾನವಾಗಿತ್ತು. ಈ ಪತ್ರವು ಕರ್ನಾಟಕ ಸರ್ಕಾರಕ್ಕೆ ಬರೆದ ಪತ್ರವಲ್ಲ ಬದಲಿಗೆ ಎಫ್‌ಸಿಐ ಮುಖ್ಯಸ್ಥರಿಗೆ ಬರೆದಿರುವ ಪತ್ರವಿದು ಎಂದು ವಿವರಿಸಿದ್ದಾರೆ. ಈ ನಿರ್ಧಾರ ರಾಜ್ಯ ಸರ್ಕಾರ ಎಫ್‌ಸಿಐ ಗೆ ಪತ್ರ ಬರೆಯುವ ಒಂದು ದಿನ ಮುಂಚಿತವಾಗಿ ತೆಗೆದುಕೊಂಡ ತೀರ್ಮಾನ ಎಂದು ಅವರು ನೆನಪಿಸಿದ್ದಾರೆ.

    ಕೇಂದ್ರ ಸರಕಾರ ಮುಂಗಾರು ಮಳೆ, ಬೆಳೆಯನ್ನು ಆಧರಿಸಿ ಕೇಂದ್ರದಲ್ಲಿರುವ ದಾಸ್ತಾನನ್ನು ಪರಿಗಣಿಸಿ ಫುಡ್ ಸೆಕ್ಯೂರಿಟಿ ಆಕ್ಟ್ ಪ್ರಕಾರ ಉಚಿತವಾಗಿ ಅಕ್ಕಿ ಕೊಡಬೇಕಾಗಿರುವ ಸರಬರಾಜಿಗೆ ಯಾವುದೇ ಭಂಗವಾಗದಂತೆ ಕಾಲಕಾಲಕ್ಕೆ ಇಂತಹ ನಿರ್ಣಯ ತೆಗೆದುಕೊಳ್ಳುವುದು ಸರ್ವೇಸಾಮಾನ್ಯ. ಈಗಾಗಲೇ ಪ್ರತಿ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೂ ಐದು ಕೆಜಿ ಉಚಿತ ಅಕ್ಕಿ ನಿರಂತರವಾಗಿ ಕೇಂದ್ರ ಸರ್ಕಾರ ನೀಡುತ್ತಿದೆ ಎಂದು ಗಮನ ಸೆಳೆದಿದ್ದಾರೆ.

    ಪ್ರತಿ ಕುಟುಂಬದ ಅಕ್ಕಿಯ ಅವಶ್ಯಕತೆಯನ್ನು ಕೇಂದ್ರ ಸರಕಾರವೇ ಪೂರೈಸುತ್ತಿದೆ. ಆದ ಕಾರಣ, ರಾಜ್ಯ ಸರಕಾರ ಬಡ ಕುಟುಂಬಗಳಿಗೆ ಕೇಂದ್ರ ಸರಕಾರದ ಅಕ್ಕಿಯ ಜೊತೆಗೆ ರಾಗಿ, ಗೋಧಿ, ಬೆಳೆ ಮತ್ತು ರವೆಯನ್ನು ನೀಡಬಹುದಾಗಿದೆ. ತಾನು ವಾಗ್ದಾನ ಮಾಡಿರುವಂತೆ ಹತ್ತು ಕೆಜಿ ಅಕ್ಕಿಯ ಬದಲಾಗಿ ಅದಕ್ಕೆ ಸಮ ಮೊತ್ತದ ಹಣವನ್ನು ನೀಡಬಹುದಾಗಿದೆ ಎಂದು ಒತ್ತಾಯಿಸಿದ್ದಾರೆ.

    ಈಗ ರಾಜ್ಯ ಸರ್ಕಾರಕ್ಕೆ ಬಡವರಿಗೆ ಸಹಾಯ ಮಾಡುವುದು ಮುಖ್ಯವಾಗಬೇಕೇ ಹೊರತು ರಾಜಕಾರಣವಲ್ಲ. ಇದು ಸಿದ್ದರಾಮಯ್ಯನವರಂತಹ ಅನುಭವಿ ರಾಜಕಾರಣಿಗೆ ತಿಳಿಯದ ಸಂಗತಿ ಅಲ್ಲ ಎಂದು ತಿಳಿಸಿದ್ದಾರೆ.

    ಅನಗತ್ಯವಾಗಿ ಕಾಂಗ್ರೆಸ್ ಪಾರ್ಟಿ ಮೋದಿಯವರು ಬಡವರ ಅನ್ನ ಕಸಿದುಕೊಳ್ಳುತ್ತಿದ್ದಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನಿರಂತರವಾಗಿ ಮೋದಿ ಸರ್ಕಾರ ದೇಶದ ಯಾವೊಬ್ಬ ನಾಗರಿಕನೂ ಹಸಿವಿನಿಂದ ಇರಬಾರದು ಎಂದೇ ಪ್ರತಿ ಬಿಪಿಎಲ್ ಕುಟುಂಬದ ಪ್ರತಿ ವ್ಯಕ್ತಿಗೆ 5ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿರುವುದನ್ನು ಮರೆಮಾಚಿ ಟೀಕಿಸುತ್ತಿರುವುದು ಅತ್ಯಂತ ಖಂಡನೀಯ ಹಾಗು ಕೀಳು ಮಟ್ಟದ ರಾಜಕೀಯವಾಗಿದೆ ಎಂದು ಆಕ್ಷೇಪಿಸಿದ್ದಾರೆ.

    ದೇಶದ ಯಾವುದೇ ಕುಟುಂಬವು ಅಕ್ಕಿ ಅಥವಾ ಗೋಧಿ ಇಲ್ಲ ಎಂದು ಹಸಿವಿನಿಂದ ಒಂದು ದಿನವು ಕಳೆದಿಲ್ಲ. ಹಾಗೆ ಅವರು ಕಳೆಯಬಾರದು ಎಂದೇ ಕೇಂದ್ರವು ಅವರಿಗೆ ಉಚಿತ ರೇಷನ್ ನೀಡುತ್ತಿರುವುದು. ಇವರ ರಾಜಕಾರಣಕ್ಕೆ ಮೋದಿಯವರ ವಿರುದ್ದ ಉತ್ತೇಕ್ಷಿತ ಸುಳ್ಳಿನ ಕಂತೆಯ ಮೂಲಕ ನಡೆಯುತ್ತಿರುವ ದುರುದ್ದೇಶದ ಆರೋಪವನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ತಿಳಿಸಿದ್ದಾರೆ.

    ಅತಿ ಮುಖ್ಯ ವಿಚಾರವೆಂದರೆ ಸನ್ಮಾನ್ಯ ಸಿದ್ದರಾಮಯ್ಯನವರೆ ನೀವು ಕೊಡಲು ನೀಡಿರುವ ಹತ್ತು ಕೆಜಿ ಅಕ್ಕಿ ವಾಗ್ದಾನದಲ್ಲಿ ಕೇಂದ್ರ ಸರ್ಕಾರ ನೀಡುತ್ತಿರುವ ಐದು ಕೆಜಿ ಅಕ್ಕಿಯನ್ನು ಲೆಕ್ಕಕ್ಕೆ ಸೇರಿಸುವುದಿಲ್ಲ ಎಂದು ಭಾವಿಸುತ್ತೇನೆ ಎಂದಿದ್ದಾರೆ.

    ಅಕ್ಕಿ ವಿತರಣೆಯ ಹೆಸರಲ್ಲಿ ರಾಜಕಾರಣ ಮಾಡದೆ ಮತ್ತು ಕೇಂದ್ರದ ಮೇಲೆ ಗೂಬೆ ಕೂರಿಸುವ ಸಣ್ಣತನ ತೋರದೆ ಬಡವರ ಆಹಾರದ ಅಗತ್ಯವನ್ನು ಕೊಡಲು ಸೂಕ್ತ ಹಾಗು ಅಗತ್ಯವಿರುವ ಆಹಾರವನ್ನು ಅಥವಾ ಅದರ ಮೌಲ್ಯದಷ್ಟು ಹಣವನ್ನು ನೀಡಲು ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


    Provided by
    Provided by
    admin
    • Website

    Related Posts

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!

    June 30, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬಳ್ಳಾರಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾ

    July 3, 2026

    ಬಳ್ಳಾರಿ: ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಹಮ್ಮಿಕೊಳ್ಳಲಾಗಿರುವ ‘ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ’ ಪ್ರಕ್ರಿಯೆ ಕುರಿತು ಸಾರ್ವಜನಿಕರಲ್ಲಿ ಮತ್ತು…

    ಕೊರಟಗೆರೆ: 8,589 ಪಿಂಚಣಿದಾರರಿಗೆ ಪಿಂಚಣಿ ತಾತ್ಕಾಲಿಕ ಸ್ಥಗಿತ: ದಾಖಲೆ ಸಲ್ಲಿಸಿ– ತಹಶೀಲ್ದಾರ್ ಮಂಜುನಾಥ್ ಕೆ.

    July 3, 2026

    ತುಮಕೂರು: ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿ ಸಲ್ಲಿಸಬಹುದು?

    July 2, 2026

    ತಲೆಗೆ ಬಿದ್ದ ಏಟು: ಜು.5ರಂದು ಕೃತಿ ಬಿಡುಗಡೆ

    July 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.