ನಾಯಂಡಹಳ್ಳಿ ಮೆಟ್ರೊ ನಿಲ್ದಾಣ ಬಳಿಯ ಪಂತರಪಾಳ್ಯ ಸಮೀಪ ಕಾರು ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದ್ದು, ಡೆಲಿವರಿ ಬಾಯ್ ಪ್ರಸನ್ನ ಕುಮಾರ್ (25) ಮೃತಪಟ್ಟಿದ್ದಾರೆ.
ಎಚ್. ಡಿ. ಕೋಟೆಯ ಪ್ರಸನ್ನ ಕುಮಾರ್ ಡೆಲಿವರಿ ಬಾಯ್ ಆಗಿದ್ದರು. ಮೈಸೂರು ರಸ್ತೆಯಲ್ಲಿ ಭಾನುವಾರ ರಾತ್ರಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಕಾರು ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ’ ಎಂದು ಬ್ಯಾಟರಾಯನಪುರ ಸಂಚಾರ ಪೊಲೀಸರು ಹೇಳಿದರು.
‘ಅಪಘಾತಕ್ಕೆ ಕಾರಣವಾದ ಕಾರು ಚಾಲಕ ವಿನಾಯಕ್ ಪರಾರಿಯಾಗಲು ಯತ್ನಿಸಿದ್ದ. ಸ್ಥಳೀಯರೇ ಆತನನ್ನು ಬೆನ್ನಟ್ಟಿ ಹಿಡಿದು ಥಳಿಸಿ ಠಾಣೆಗೆ ಒಪ್ಪಿಸಿದ್ದಾರೆ. ಪಾನಮತ್ತನಾಗಿ ಆತ ಕಾರು ಚಲಾಯಿಸಿದ್ದನೆಂಬುದು ವೈದ್ಯಕೀಯ ಪರೀಕ್ಷೆಯಿಂದ ಗೊತ್ತಾಗಿದೆ’ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


