nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ಕಟಾವಿಗೆ ಬಂದಿದ್ದ ಕಬ್ಬು ಬೆಂಕಿಗಾಹುತಿ: ಲಕ್ಷಾಂತರ ರೂಪಾಯಿ ನಷ್ಟದಿಂದ ಆರ್ಥಿಕ ಸಂಕಷ್ಟದಲ್ಲಿ ರೈತರು

    October 27, 2026

    ಜಿಲ್ಲಾ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 27, 2026

    ಉದ್ಯಮಶೀಲತೆಯ ಹೊಸ ಮುಂಜಾವು: ಭದ್ರತೆಯಿಲ್ಲದ ಸಾಲ, ಆತ್ಮವಿಶ್ವಾಸಕ್ಕೊಂದು ಭದ್ರ ಬುನಾದಿ!

    October 27, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ಕಟಾವಿಗೆ ಬಂದಿದ್ದ ಕಬ್ಬು ಬೆಂಕಿಗಾಹುತಿ: ಲಕ್ಷಾಂತರ ರೂಪಾಯಿ ನಷ್ಟದಿಂದ ಆರ್ಥಿಕ ಸಂಕಷ್ಟದಲ್ಲಿ ರೈತರು
    • ಜಿಲ್ಲಾ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಉದ್ಯಮಶೀಲತೆಯ ಹೊಸ ಮುಂಜಾವು: ಭದ್ರತೆಯಿಲ್ಲದ ಸಾಲ, ಆತ್ಮವಿಶ್ವಾಸಕ್ಕೊಂದು ಭದ್ರ ಬುನಾದಿ!
    • ಡಿಸಿಎಂ ಡಾ.ಜಿ. ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು
    • ದೀಪಾವಳಿಯಲ್ಲಿ ಸಿಹಿ ತಿನ್ನುವ ಆಸೆಯಿದೆಯೇ? ಶುಗರ್ ಫ್ರೀ ಸಿಹಿ ಸಂಪೂರ್ಣ ಸುರಕ್ಷಿತವೇ? ಮಧುಮೇಹಿಗಳು ತಿಳಿಯಬೇಕಾದ ಸಂಗತಿಗಳು
    • ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ: ಉದ್ಯೋಗ ಸಂದರ್ಶನಕ್ಕೆ ಹೊರಟಿದ್ದ ಇಬ್ಬರು ಯುವತಿಯರು ದುರ್ಮರಣ!
    • ‘ನಮ್ಮತುಮಕೂರು’ ವರದಿಯ ಬೆನ್ನಲ್ಲೇ ಎಚ್ಚೆತ್ತ ಆಡಳಿತ: ಶಿರಾಗೇಟ್ ರಸ್ತೆಯಲ್ಲಿ ಕೊಳೆತ ಬೂದುಗುಂಬಳಕಾಯಿ ತೆರವು!
    • ಕೊರಟಗೆರೆ: ತುಂಡಾದ ವಿದ್ಯುತ್ ತಂತಿಗೆ 6 ಕುರಿ ಬಲಿ: ಜೀವನಾಧಾರ ಕಳೆದುಕೊಂಡ ರೈತ ಮಹಿಳೆಯಿಂದ ಕಣ್ಣೀರು, ಪರಿಹಾರಕ್ಕೆ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಧಾನಪರಿಷತ್ತಿನ ಚುನಾವಣೆ ನಾಮಪತ್ರ ಸಲ್ಲಿಕೆ ; ಕಾಂಗ್ರೆಸ್ ನ ಮೂರೂ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸ: ಮುಖ್ಯಮಂತ್ರಿ ಸಿದ್ದರಾಮಯ್ಯ
    ರಾಜ್ಯ ಸುದ್ದಿ June 20, 2023

    ವಿಧಾನಪರಿಷತ್ತಿನ ಚುನಾವಣೆ ನಾಮಪತ್ರ ಸಲ್ಲಿಕೆ ; ಕಾಂಗ್ರೆಸ್ ನ ಮೂರೂ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸ: ಮುಖ್ಯಮಂತ್ರಿ ಸಿದ್ದರಾಮಯ್ಯ

    By adminJune 20, 2023No Comments2 Mins Read
    siddharamayya 4

    ಬೆಂಗಳೂರು, ಜೂನ್ 20: ವಿಧಾನಪರಿಷತ್ತಿನ ತೆರವಾದ ಸ್ಥಾನಗಳ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಜಗದೀಶ್ ಶೆಟ್ಟರ್, ಎನ್.ಎಸ್.ಬೋಸರಾಜು, ತಿಪ್ಪಣ್ಣಪ್ಪ ಕಮಕನೂರು ನಾಮಪತ್ರ ಸಲ್ಲಿಸಿದ್ದಾರೆ. ಇಂದು ನಾಮಪತ್ರ ಸಲ್ಲಿಸಿರುವ ಕಾಂಗ್ರೆಸ್ ಪಕ್ಷದ ಈ ಮೂರು ಸದಸ್ಯರು ಚುನಾವಣೆಯಲ್ಲಿ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ. ಇವರು ಚುನಾವಣೆಯಾದರೂ ಗೆಲ್ಲುತ್ತಾರೆ, ಆಗದಿದ್ದರೂ ಗೆಲ್ಲುತ್ತಾರೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು.

    ಅವರು ಇಂದು ವಿಧಾನಪರಿಷತ್ತಿನ ಚುನಾವಣೆಗೆ ಅಭ್ಯರ್ಥಿಗಳೊಂದಿಗೆ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

    ದೆಹಲಿ ಪ್ರವಾಸ:

    ರಾಷ್ಟ್ರಪತಿ ಹಾಗೂ ಕೇಂದ್ರ ಸಚಿವರೊಂದಿಗೆ ಸೌಜನ್ಯದ ಭೇಟಿ: ನಾಳೆ ದೆಹಲಿಯಲ್ಲಿ ರಾಷ್ಟ್ರಪತಿಗಳನ್ನು ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡುತ್ತಿದ್ದು, ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಕೇಂದ್ರ ಆಹಾರ ಸಚಿವರನ್ನು ಭೇಟಿ ಮಾಡಿ ಅಕ್ಕಿ ನೀಡುವಂತೆ ಮನವಿ ಮಾಡಲಿದ್ದಾರೆ ಎಂದರು. ಮುಖ್ಯಮಂತ್ರಿಯಾದ ನಂತರ ಕೇಂದ್ರ ಸಚಿವರೊಂದಿಗೆ ಸೌಜನ್ಯದ ಭೇಟಿ ಮಾಡಲಿರುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು.

    ಅಕ್ಕಿ ಖರೀದಿಗೆ ಪ್ರಯತ್ನ: ಪಶ್ಚಿಮ ಬಂಗಾಳ, ಆಂಧ್ರಪ್ರದೇಶ, ತೆಲಂಗಾಣ ಛತ್ತೀಸಗಢ ರಾಜ್ಯದೊಂದಿಗೆ ಅಕ್ಕಿ ಖರೀದಿ ಬಗ್ಗೆ ಚರ್ಚಿಸಲಾಗಿದೆ. ರಾಜ್ಯಕ್ಕೆ 2,28,000 ಮೆಟ್ರಿಕ್ ಟನ್ ಅಕ್ಕಿ ದಾಸ್ತಾನು ಬೇಕಾಗಿದೆ. ಛತ್ತೀಸಗಢ ದಿಂದ ಅಕ್ಕಿ ಖರೀದಿಸಿದರೆ ಸಾಗಾಣಿಕೆಯೂ ಸೇರಿ, ಎಫ್ ಸಿ ಐ ಗಿಂತ ದರ ಹೆಚ್ಚಾಗುತ್ತದೆ. ತೆಲಂಗಾಣದಲ್ಲಿ ಅಕ್ಕಿ ದಾಸ್ತಾನು ಲಭ್ಯವಿಲ್ಲವೆಂದು ತಿಳಿಸಿದ್ದು, ಆಂಧ್ರಪ್ರದೇಶದೊಂದಿಗೆ ನಮ್ಮ ರಾಜ್ಯದ ಅಧಿಕಾರಿಗಳು ಚರ್ಚಿಸುತ್ತಿದ್ದಾರೆ. ಭಾರತ ಸರ್ಕಾರದ ಮೂರು ಸಂಸ್ಥೆಗಳಾದ ಎನ್ ಸಿ ಸಿಎಫ್, ನಾಫೆಡ್ ಹಾಗೂ ಕೇಂದ್ರೀಯ ಭಂಡಾರಗಳಿಂದ ಅಕ್ಕಿ ಖರೀದಿಗೆ ದರಪಟ್ಟಿ ಕರೆಯಲಾಗಿದೆ. ಅಕ್ಕಿ ಖರೀದಿ ಬಗ್ಗೆ ಎಫ್ ಸಿ ಐ ಗೆ ಜೂನ್ 9 ರಂದು ಪತ್ರ ಬರೆಯಲಾಗಿದ್ದು, ಎಫ್ ಸಿ ಐ ಅವರು ತಮ್ಮಲ್ಲಿ 7 ಲಕ್ಷ ಮೆಟ್ರಿ ಟನ್ ಅಕ್ಕಿ ದಾಸ್ತಾನು ಇದ್ದು, ರಾಜ್ಯಕ್ಕೆ ಸರಬರಾಜು ಮಾಡಲಾಗುವುದು ಎಂದು ಜೂನ್ 12 ರಂದು ತಿಳಿಸಿದ್ದಾರೆ.

    ಬಡವರ ವಿರೋಧಿ ಕ್ರಮ: ಎಫ್.ಸಿ.ಐ ಉಪ ವ್ಯವಸ್ಥಾಪಕರೊಂದಿಗೂ ಮಾತನಾಡಿದ್ದು, ಅವರೂ ಅಕ್ಕಿ ನೀಡುವುದಾಗಿ ಹೇಳಿದ್ದರು. ಇದಾದ ನಂತರ ಕೇಂದ್ರ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಯವರು ಹಸ್ತಕ್ಷೇಪ ಮಾಡಿ ಜೂನ್ 13 ರಂದು ಎಫ್.ಸಿ.ಐ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರು ಪತ್ರ ಬರೆದು ರಾಜ್ಯಗಳಿಗೆ ಅಕ್ಕಿ ನೀಡುವುದನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ನಂತರ ನಮಗೆ ¥ಪತ್ರ ಬರೆದು ಅಕ್ಕಿ ನೀಡಲಾಗುವುದಿಲ್ಲ ಎಂದು ತಿಳಿಸಿದ್ದಾರೆ. ಇದು ದ್ವೇಷದ ರಾಜಕಾರಣ, ಬಡವರ ವಿರೋಧಿ ಕ್ರಮವಲ್ಲವೇ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

    ವಿಳಂಬವಾದರೂ ಅಕ್ಕಿ ಕೊಟ್ಟೇ ಕೊಡುತ್ತೇವೆ ದ್ವೇಷದ ರಾಜಕಾರಣ ಮಾಡುವ ಇವರಿಗೆ ಮಾನವೀಯತೆ, ಇದೆಯೇ? ದ್ವೇಷದ ರಾಜಕೀಯ ಮಾಡುತ್ತಾರಲ್ಲ ಎಂದು ಪ್ರಶ್ನಿಸಿದರು. ಕೇಂದ್ರದ ಈ ನಡೆಯನ್ನು ಖಂಡಿಸಿ ನಮ್ಮ ಪಕ್ಷದ ವತಿಯಿಂದ ಎಲ್ಲೆಡೆ ಪ್ರತಿಭಟನೆ ಮಾಡಲಾಗಿದೆ. ದುರುದ್ದೇಶದಿಂದ ಈ ಕೆಲಸ ಮಾಡಿದ್ದಾರೆ. ಹಣ ನೀಡಿ ಅಕ್ಕಿಯನ್ನು ಪಡೆಯುತ್ತೇವೆ. ನಾವು ಸಹಕಾರಿ ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಯಾವಾಗಲೂ ಹೇಳುತ್ತಾರೆ. ಇದೇ ಇವರ ಸಹಕಾರಿ ಒಕ್ಕೂಟ ವ್ಯವಸ್ಥೆಯೇ? ಎಂದು ಪ್ರಶ್ನಿಸಿದರು. ಬಿಜೆಪಿ ಸರ್ಕಾರ ಸರ್ವಾಧಿಕಾರಿಯಲ್ಲ. ಇದೊಂದು ಪ್ರಜಾಪ್ರಭುತ್ವದ ವ್ಯವಸ್ಥೆ, ಒಕ್ಕೂಟ ರಚನೆಯನ್ನು ಹೊಂದಿದ್ದೇವೆ. ಕೇಂದ್ರ ಸರ್ಕಾರವೇ ಭತ್ತ ಬೆಳೆಯುತ್ತದೆಯೇ. ಎಲ್ಲೆಲ್ಲಿ ಭತ್ತ ಬೆಳೆಯುತ್ತಾರೋ ಅಲ್ಲಿಂದ ಅಕ್ಕಿಯನ್ನು ಪಡೆಯುತ್ತಾರೆ. ಮಾತೆತ್ತಿದರೆ ಆಹಾರ ಭದ್ರತಾ ಕಾಯ್ದೆ ಎನ್ನುವ ಕೇಂದ್ರ ಸರ್ಕಾರ, ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತಂದಿದ್ದು ಯು.ಪಿ.ಎ ಸರ್ಕಾರದಲ್ಲಿ ಮನ್ ಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಎನ್ನುವುದನ್ನು ಮರೆಯುತ್ತಿದೆ ಎಂದರು. ಈ ಕಾಯ್ದೆ ಬಂದಿದ್ದರಿಂದ 5 ಕೆಜಿ ಅಕ್ಕಿ ಕೊಡುವುದು ಮುಂದುವರೆದಿದೆ. ಅಕ್ಕಿ ಕೊಡಿ ಎಂದು ಕೇಳಿದ್ದೇವೆ. ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ನೀಡುವುದಾಗಿ ಘೋಷಿಸಿದ್ದೇವೆ. ನಾವು ಕೊಟ್ಟೇ ಕೊಡುತ್ತೇವೆ. ಸ್ವಲ್ಪ ವಿಳಂಬವಾಗಬಹುದು ಅಷ್ಟೇ ಎಂದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಡಿಸಿಎಂ ಡಾ.ಜಿ. ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು

    October 27, 2026

    ಎಸ್‌ ಐಆರ್‌ ಮುಕ್ತಾಯ; ಕರ್ನಾಟಕದ ಮತದಾರರ ಪಟ್ಟಿಯಲ್ಲಿ ಏನೇನು ಬದಲಾವಣೆ?

    October 27, 2026

    ದೀಪಾವಳಿಗೂ ಮುನ್ನ ಮನೆ ಸ್ವಚ್ಛಗೊಳಿಸುತ್ತಿದ್ದೀರಾ? ಹಲ್ಲಿ, ಜಿರಳೆಗಳ ಕಾಟ ತಪ್ಪಿಸಲು ಈ ಕ್ರಮ ಅನುಸರಿಸಿ!

    October 27, 2026

    Comments are closed.

    Our Picks

    ಕ್ರೆಡಿಟ್ ಕಾರ್ಡ್ ಹೊಂದಿರುವ ಪತಿ ಮೃತಪಟ್ಟರೆ ಸಾಲವನ್ನು ಪತ್ನಿ ತೀರಿಸಬೇಕಾ? ಬ್ಯಾಂಕಿಂಗ್ ನಿಯಮಗಳೇನು?

    October 26, 2026

    PM Kisan ಹಣ ಯಾವಾಗ ಬರುತ್ತೆ? ರೈತರು ಈ ಕೆಲಸಗಳನ್ನು ಮಾಡದಿದ್ದರೆ ಕಂತು ಸ್ಥಗಿತವಾಗಬಹುದು!

    October 26, 2026

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ಕಟಾವಿಗೆ ಬಂದಿದ್ದ ಕಬ್ಬು ಬೆಂಕಿಗಾಹುತಿ: ಲಕ್ಷಾಂತರ ರೂಪಾಯಿ ನಷ್ಟದಿಂದ ಆರ್ಥಿಕ ಸಂಕಷ್ಟದಲ್ಲಿ ರೈತರು

    October 27, 2026

    ಬೀದರ್: ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಭವಿಸುತ್ತಿರುವ ಅಗ್ನಿ ಅವಘಡಗಳಿಂದಾಗಿ ಕಟಾವಿನ ಹಂತಕ್ಕೆ ಬಂದಿದ್ದ ಕಬ್ಬಿನ ಬೆಳೆ ಸುಟ್ಟು ಕರಕಲಾಗಿದ್ದು, ಸಾಲ–ಸೋಲ…

    ಜಿಲ್ಲಾ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 27, 2026

    ಉದ್ಯಮಶೀಲತೆಯ ಹೊಸ ಮುಂಜಾವು: ಭದ್ರತೆಯಿಲ್ಲದ ಸಾಲ, ಆತ್ಮವಿಶ್ವಾಸಕ್ಕೊಂದು ಭದ್ರ ಬುನಾದಿ!

    October 27, 2026

    ಡಿಸಿಎಂ ಡಾ.ಜಿ. ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು

    October 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.