ಚಿಕ್ಕಬಳ್ಳಾಪುರ : ಕರ್ನಾಟಕ ರಾಜ್ಯದಲ್ಲಿ ಕೋವಿಡ್-19 ರ 2ನೇ ಅಲೆಯು ವ್ಯಾಪಕವಾಗಿ ಹರಡುತ್ತಿರುವ ಕಾರಣ ಲಾಕ್ ಡೌನ್ ಜಾರಿಗೊಳಿಸಿರುವ ಪರಿಣಾಮವಾಗಿ ಕಾರ್ಮಿಕರಿಗೆ ಅರ್ಥಿಕವಾಗಿ ನಷ್ಟವಾಗಿರುವುದನ್ನು ಗಮನಿಸಿ. 11 ವರ್ಗಗಳ ಅಸಂಘಟಿತ ಕಾರ್ಮಿಕರಾದ ಅಗಸರು, ಕ್ಷೌರಿಕರು, ಗೃಹಕಾರ್ಮಿಕರು, ಟೈಲರ್ ಗಳು, ಮೆಕ್ಯಾನಿಕ್, ಚಿಂದಿ ಆಯುವವರು, ಹಮಾಲರು, ಅಕ್ಕಸಾಲಿಗರು, ಕಮ್ಮರರು, ಕುಂಬಾರರು ಹಾಗೂ ಭಟ್ಟಿ ಕಾರ್ಮಿಕ ವೃತ್ತಿಯಲ್ಲಿ ತೊಡಗಿರುವ ಕಾರ್ಮಿಕರಿಗೆ ರೂ. 2000/- ಗಳ ಒಂದು ಬಾರಿ ನೆರವಿನ ವಿಶೇಷ ಪ್ಯಾಕೇಜನ್ನು ಮುಖ್ಯಮಂತ್ರಿ ಯಡಿಯೂರಪ್ಪನವರು ಘೋಷಿಸಿರುತ್ತಾರೆ ಜಿಲ್ಲಾ ಕಾರ್ಮಿಕ ಅಧಿಕಾರಿ ವರಲಕ್ಷ್ಮೀ ಅವರು ತಿಳಿಸಿದ್ದಾರೆ.
ಸದರಿ ವರ್ಗಗಳ 18-65 ವಯೋಮಾನದ, ಬಿ.ಪಿ.ಎಲ್ ಕುಟುಂಬದ ಓರ್ವ ಫಲಾನುಭವಿಯು ಮಾತ್ರ ಅರ್ಹರಾಗಿದ್ದು, ಆಧಾರ್ ಸಂಖ್ಯೆ ಲಿಂಕ್ ಆಗಿರುವ ಬ್ಯಾಂಕ್ ಖಾತೆ ಹೊಂದಿರಬೇಕಾಗಿದ್ದು, ನಿಗದಿತ ವೃತ್ತಿ, ನಿರ್ವಹಿಸುತ್ತಿರುವ ಕುರಿತು ಈ ಕೆಳಕಂಡ ಅಧಿಕಾರಿಗಳಿಂದ ಪಡೆದ ಉದ್ಯೋಗ ದೃಢೀಕರಣ ಪ್ರಮಾಣ ಪತ್ರ ಹಾಗೂ ಇತ್ತೀಚಿನ ಭಾವ ಚಿತ್ರದೊಂದಿಗೆ http://sevasindhu.karnataka.gov.in/ ಪೋರ್ಟಲ್‌ನಲ್ಲಿ ದಿನಾಂಕ: 31-07-2021 ರೊಳಗೆ ಸಲ್ಲಿಸುವುದು.
ಬಿ.ಬಿ.ಎಂ.ಪಿ ವ್ಯಾಪ್ತಿಯ ವಾರ್ಡ್ಗಳ ಮಟ್ಟದಲ್ಲಿನ ಕಂದಾಯ ಅಧಿಕಾರಿ/ಕಂದಾಯ ನಿರೀಕ್ಷಕರು /ಹಿರಿಯ ಆರೋಗ್ಯ ಅಧಿಕಾರಿಗಳು/ಆರೋಗ್ಯ ನಿರೀಕ್ಷಕರು.
ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಮಹಾನಗರ ಪಾಲಿಕೆ/ನಗರ ಸಭೆ /ಪುರಸಭೆ/ಪಟ್ಟಣ ಪಂಚಾಯಿತಿಯ ಕಂದಾಯ ಅಧಿಕಾರಿ/ಕಂದಾಯ ನಿರೀಕ್ಷಕರು.
ತಾಲ್ಲೂಕು ಮಟ್ಟದಲ್ಲಿ ಕಂದಾಯ ಇಲಾಖೆಯ ತಹಶೀಲ್ದಾರರು/ಉಪ ತಹಶೀಲ್ದಾರರು/ಕಂದಾಯ ಅಧಿಕಾರಿಗಳು/ಕಂದಾಯ ನಿರೀಕ್ಷಕರು.
ಕಾರ್ಮಿಕ ಇಲಾಖೆಯ ಸಹಾಯಕ ಕಾರ್ಮಿಕ ಆಯುಕ್ತರು/ಕಾರ್ಮಿಕ ಅಧಿಕಾರಿಗಳು/ಹಿರಿಯ ಕಾರ್ಮಿಕ ನಿರೀಕ್ಷಕರು/ ಕಾರ್ಮಿಕ ನಿರೀಕ್ಷಕರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ/ ಕಾರ್ಯದರ್ಶಿ.
ಹಮಾಲಿ ವೃತ್ತಿಯಲ್ಲಿ ತೊಡಗಿಕೊಂಡ ಕಾರ್ಮಿಕರು ಮೇಲ್ಕಂಡ ಅಧಿಕಾರಿಗಳು ಅಥವಾ ತಾವು ಕೆಲಸ ನಿರ್ವಹಿಸುತ್ತಿರುವ ಇಲಾಖೆ/ಮಂಡಳಿ/ನಿಗಮ ಅಧಿಕೃತ್ತ ಅಧಿಕಾರಿಗಳಿಂದ ಪ್ರಮಾಣ ಪತ್ರ ಪಡೆಯುವುದು.
ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು. ಯಾವುದೇ ಇಲಾಖೆಯ ಪತ್ರಾಂಖಿತ ಅಧಿಕಾರಿಗಳು (Gazetted Officers)
ಅರ್ಜಿ ಸಲ್ಲಿಸಲು ಮಾರ್ಗದರ್ಶನ ಹಾಗೂ ನೆರವು ಪಡೆಯಲು ಅರ್ಜಿ ಸಲ್ಲಿಸಲು ಈ ಕೆಳಕಂಡ ಕಛೇರಿ ಅಥವಾ ದೂರವಾಣಿಗಳನ್ನು ಸಂಪರ್ಕಿಸಬಹುದಾಗಿದೆ.
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೇವಾ ಕೇಂದ್ರಗಳು/ವಾರ್ಡ್ ಮಟ್ಟದ ಸೇವಾ ಕೇಂದ್ರಗಳು/ ಸಾಮಾನ್ಯ ಸೇವಾ ಕೇಂದ್ರಗಳು (CSC) /ಕಾರ್ಮಿಕ ಸೇವಾ ಕೇಂದ್ರಗಳನ್ನು ಅಥವಾ ಕಾರ್ಮಿಕ ನಿರೀಕ್ಷಕರು/ಹಿರಿಯ ಕಾರ್ಮಿಕ ನಿರೀಕ್ಷಕರು/ ಕಾರ್ಮಿಕ ಅಧಿಕಾರಿಗಳ ಕಛೇರಿಯನ್ನು ಬೇಟಿ ನೀಡಬಹುದಾಗಿರುತ್ತದೆ.
ಕಾರ್ಮಿಕ ಸಹಾಯವಾಣಿ ಸಂಖ್ಯೆ 155214 ಅನ್ನು ಅಥವಾ ಸೇವಾಸಿಂಧು ಸಂಸ್ಥೆಯ 8088304855/6361799796/9380204364/9380206704 (9 AM to 6 PM ರಜಾ ದಿನಗಳನ್ನು ಹೊರತುಪಡಿಸಿ) ಸಂಪರ್ಕಿಸಬಹುದಾಗಿದೆ.
ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ, ಆಧಾರ್ ಸಂಖ್ಯೆಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ಡಿ.ಬಿ.ಟಿ ಮೂಲಕ ಪರಿಹಾರವನ್ನು ನೇರವಾಗಿ ವರ್ಗಾಯಿಸಲಾಗುವುದು.
ರಾಜ್ಯ ಸರ್ಕಾರದ ಮೇಲಿನ ಸೌಲಭ್ಯವನ್ನು ಅರ್ಹ ಫಲಾನುಭವಿಗಳು ಸದು ಉಪಯೋಗ ಪಡಿಸಿಕೊಳ್ಳುಬಹುದೆಂದು ಜಿಲ್ಲಾ ಕಾರ್ಮಿಕ ಅಧಿಕಾರಿ ವರಲಕ್ಷ್ಮೀ ಅವರು ತಿಳಿಸಿದ್ದಾರೆ.