ಇಂದು ಕೃಷಿ ಸಚಿವರಾದ ಎನ್. ಚೆಲುವನಾರಾಯಣ ಸ್ವಾಮಿಯವರನ್ನು AIKKMS ನ ರಾಜ್ಯ ಉಪಾಧ್ಯಕ್ಷರಾದ ಶಿವಪ್ರಕಾಶ, ರಾಜ್ಯ ಕಚೇರಿ ಕಾರ್ಯದರ್ಶಿಗಳಾದ ಎಸ್.ಎನ್.ಸ್ವಾಮಿ ಮತ್ತು ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರಾದ ಮೈಸೂರು ಬಸವರಾಜುರವರು ಭೇಟಿ ಮಾಡಿ ರೈತರ ಬೇಡಿಕೆಗಳ ಮನವಿ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಬಸವರಾಜುರವರು ರೈತರ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಮಾತನಾಡುತ್ತೇನೆಂದು ಭರವಸೆ ನೀಡಿದರು. ಪೂರ್ವ ಮುಂಗಾರು ಬೆಳೆ ಮಳೆ ಅಭಾವದಿಂದ ನಷ್ಟವಾದ ಕಾರಣ ಪರಿಹಾರ ನೀಡಬೇಕು. ಮೂರು ಕರಾಳ ಕೃಷಿ ಕಾಯ್ದೆಗಳನ್ನು ವಾಪಸ್ ತೆಗೆದುಕೊಳ್ಳಬೇಕು, ಮುಂತಾದ ಬೇಡಿಕೆಗಳನ್ನು ವಿವರಿಸಿ, ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಲಾಯಿತು.
ಇತ್ತೀಚೆಗೆ ಕೊಬ್ಬರಿ ಬೆಲೆ ಪಾತಾಳಕ್ಕೆ ಇಳಿದಿರುವ ಬಗ್ಗೆ ಮತ್ತು ನಫೆಡ್ ಕೇಂದ್ರಗಳಲ್ಲಿ ಕೊಬ್ಬರಿ ಖರೀದಿಯಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ತೆಂಗು ಬೆಳೆಗಾರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ನಿಯೋಗದೊಂದಿಗೆ ಮಾತನಾಡಲು ಸಮಯ ಕೊಡುತ್ತೇವೆಂದು ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA