ಬೆಂಗಳೂರು: ಕೆಲ ಸಚಿವರನ್ನು ಸಿದ್ದರಾಮಯ್ಯನವರ ಚೇಲಾಗಳು ಎಂದಿದ್ದ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಂಬಿ ಪಾಟೀಲ್ ವಾಗ್ದಾಳಿ ನಡೆಸಿದ್ದು, ‘ಪ್ರತಾಪ್ ಸಿಂಹ ಅವರಿಗೆ ಚೇಲಾಗಿರಿ ಮಾಡಿ ರೂಢಿ ಇರಬೇಕು’ ಎನ್ನುವ ಮೂಲಕ ತಿರುಗೇಟು ನೀಡಿದ್ದಾರೆ.
ಇವರು ಚೇಲಾ ಅಂತಾರೆ, ಬಿ ಎಲ್ ಸಂತೋಷ್ ಚೇಳು ಅಂತಾರೆ. ಬಹುಶಃ ಸಂತೋಷ್ ಬುಟ್ಟಿಯಲ್ಲಿ ಇಂಥ ಚೇಳುಗಳೇ ಬಹಳ ಇರಬೇಕು. ಇವತ್ತು ಅವರಿಗೆ ಕಡಿಯಿರಿ, ನಾಳೆ ಇವರಿಗೆ ಕಡಿಯಿರಿ ಎಂದು ಸಂತೋಷ್ ಚೇಳು ಬಿಡ್ತಾರೆ ಅನಿಸುತ್ತದೆ. ಪ್ರತಾಪ್ ಸಿಂಹ ಅವರಿಗೆ ಸದ್ಬುದ್ದಿ ಕೊಡಲಿ. ಪ್ರತಾಪ್ ಸಿಂಹ ಇದನ್ನೆಲ್ಲ ನಿಲ್ಲಿಸಿ ಅಕ್ಕಿ ಕೊಡಿಸುವ ಕೆಲಸ ಮಾಡಲಿ ಎಂದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


