ಈ ಸಾಲಿನ ಸಿಇಟಿ ಪರೀಕ್ಷೆಯಲ್ಲಿ ವೃತ್ತಿಪರ ಕೋರ್ಸುಗಳಿಗೆ ಬ್ಯಾಂಕ್ ಪಡೆದಿರುವ ವಿಕಲಚೇತನ ಅಭ್ಯರ್ಥಿಗಳ ವೈದ್ಯಕೀಯ ತಪಾಸಣೆಯು ಜೂನ್ 26, 27 ಮತ್ತು 28ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆವರಣದಲ್ಲಿ ನಡೆಯಲಿದೆ. ಅರ್ಹ ಅಭ್ಯರ್ಥಿಗಳು ಈ ಪ್ರಕ್ರಿಯೆಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ.
ಈ ಬಗ್ಗೆ ಮಂಗಳವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಅರ್ಹ ವಿಕಲಚೇತನ ಅಭ್ಯರ್ಥಿಗಳ ಪಟ್ಟಿಯನ್ನು ಅವರು ಯಾವ ದಿನ ಈ ತಪಾಸಣೆಗೆ ಬರಬೇಕೆನ್ನುವ ದಿನಾಂಕದ ಸಮೇತ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಜತೆಗೆ ಯಾವ್ಯಾವ ದಾಖಲೆಗಳನ್ನು ತರಬೇಕು ಎನ್ನುವುದನ್ನೂ ಜಾಲತಾಣದಲ್ಲಿ ಸೂಚಿಸಲಾಗಿದೆ. ಇದರಂತೆ ಆಯಾ ದಿನದಂದು ಬೆಳಿಗ್ಗೆ 9. 30ಕ್ಕೆ ಪ್ರಾಧಿಕಾರದಲ್ಲಿ ಹಾಜರಿರಬೇಕು. ತಪಾಸಣೆ ಪ್ರಕ್ರಿಯೆಯು ಬೆಳಿಗ್ಗೆ 10 ಗಂಟೆಗೆ ಆರಂಭವಾಗಲಿದೆ” ಎಂದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


