ಬೆಂಗಳೂರಿನಲ್ಲಿ ಯೋಗರತ್ನ – 2023 ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಿತು. ಜಯಮಹಲ್ ಮುಖ್ಯ ರಸ್ತೆ, ಚಾಮರ ವಜ್ರದಲ್ಲಿ ಶ್ವಾಸಗುರು ಶ್ರೀ ವಚನಾನಂದ ಶ್ರೀಗಳ ನೇತೃತ್ವದಲ್ಲಿ ಯೋಗರತ್ನ – 2023 ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪಾಲ್ಗೊಂಡ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ತದನಂತರ ಸಾಧಕ – ಸಾಧಕಿಯರಿಗೆ ಯೋಗ ರತ್ನ – 2023 ಪ್ರಶಸ್ತಿಯನ್ನು ವಿವರಿಸಿದರು.
ಈ ಸಂದರ್ಭದಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕರ ರವಿಶಂಕರ್ ಗುರೂಜಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮಂತ್ರಿ ಮುರುಗೇಶ್ ನಿರಾಣಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಡಾ ಕೆ ಗೋವಿಂದರಾಜ್ ಹಾಗೂ ಇನ್ನಿತರ ನಾಯಕರು ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


